--Ads--

ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ

On: August 5, 2025 9:45 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಆಗಸ್ಟ್ 11 ಕ್ಕೆ ನುಲಿಯ ಚಂದಯ್ಯ ಜಯಂತಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 02 : ನುಲಿಯ ಚಂದಯ್ಯ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಗಸ್ಟ್ 11 ರಂದು ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ಟೌನ್ ನ ತಾಲ್ಲೂಕು ಕಚೇರಿ ರಸ್ತೆಯ ಕೊರಮರ ಬೀದಿಯ ಭಜನಾ ಮಂದಿರ ಮುಂಭಾಗದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಸೈಯಿದಾ ಅಯಿಷಾ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನುಲಿಯ ಚಂದಯ್ಯ ಜಯಂತಿಯ ಅಂಗವಾಗಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನುಲಿಯ ಚಂದಯ್ಯ ನವರು ವಚನಕಾರರಾಗಿ ಕನ್ನಡ ಸಾಹಿತ್ಯಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ.

ಶಿಷ್ಠಾಚಾರಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸಬೇಕು. ಅಂದು ಆವರಣದಲ್ಲಿ ಉಪಹಾರ ಮತ್ತು ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ.

ಕಲಾ ಪ್ರದರ್ಶನ ನೀಡುವ ತಂಡಗಳನ್ನು ನಿಯೋಜಿಸುವಂತೆ ಹಾಗೂ ನುಲಿಯ ಚಂದಯ್ಯ ಅವರ ವಿಚಾರಧಾರೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಹಾಗೂ ವಚನ ಗಾಯನ ಸೇರಿದಂತೆ ಅಗತ್ಯ ವ್ಯವಸ್ಥೆ ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಪರಿವೀಕ್ಷಕರಾದ ಪದ್ಮಾವತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಮತ್ತು ಸದಸ್ಯರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now