ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಎ.ಬಿ. ಬಸವರಾಜು
ವಿಜಯ ದರ್ಪಣ ನ್ಯೂಸ್…..
ಜಿಲ್ಲಾಡಳಿತ ಭವನದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ
ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಎ.ಬಿ. ಬಸವರಾಜು
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆಗಸ್ಟ್ 15(ಕ.ವಾ):- “79 ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ರವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್ ಅವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ವರ್ಗದವರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಿಲ್ಲಾಡಳಿತ ಭವನದಲ್ಲಿ ಸಂಗೊಳ್ಳಿ ರಾಯಣ್ಣ ಜಯಂತಿ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆಗಸ್ಟ್ 15: “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಜಯಂತಿ ಅಂಗವಾಗಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.
“ಸಂಗೊಳ್ಳಿ ರಾಯಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್ ಅವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.