--Ads--

ಜನ್ಮದಾತರಿಗೂ ಹಾಗೂ ಅಕ್ಷರ ಕಲಿಸಿದ ಗುರುಗಳಿಗೆ ವಿದ್ಯಾರ್ಥಿಗಳು ಋಣಿಯಾಗಿರಬೇಕು: ಶಾಸಕ ಬಿ ಎನ್ ರವಿಕುಮಾರ್ 

On: August 15, 2025 4:02 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಜನ್ಮದಾತರಿಗೂ ಹಾಗೂ ಅಕ್ಷರ ಕಲಿಸಿದ ಗುರುಗಳಿಗೆ ವಿದ್ಯಾರ್ಥಿಗಳು ಋಣಿಯಾಗಿರಬೇಕು: ಶಾಸಕ ಸಿ ಎನ್ ರವಿಕುಮಾರ್

ಶಿಡ್ಲಘಟ್ಟ : ಜನ್ಮ ನೀಡಿದ ತಾಯಿ, ತಂದೆ ಹಾಗೂ ಅಕ್ಷರ ಕಲಿಸಿದ ಗುರುಗಳಿಗೆ ವಿದ್ಯಾರ್ಥಿಗಳು ಋಣಿಯಾಗಿರಬೇಕು ಸಂಸ್ಕಾರವಂತರಾಗಿ ಬೆಳೆದು ಗುರು, ಹಿರಿಯರನ್ನು ಗೌರವಿಸಬೇಕು ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು.

ತಾಲ್ಲೂಕು ರಾಷ್ಟೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ನಗರದಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೭೯ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ನಾಡಿನ ಭವಿಷ್ಯದ ಪ್ರಜೆಗಳಾದ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ಈ ನಾಡು, ದೇಶದ ಅಭಿವೃದ್ದಿ ಪ್ರಗತಿ ನಿಂತಿದೆ ನೀವು ಸರಿಯಾದ ದಾರಿಯಲ್ಲಿ ಸಾಗಬೇಕಿದೆ ಉತ್ತಮ ಸಂಸ್ಕಾರವಂತರಾಗಿ ದೇಶ ಪ್ರೇಮಿಗಳಾಗಿ ಬೆಳೆಯಬೇಕಿದೆ ಎಂದು ಹೇಳಿದರು.

ಈ ದೇಶದ ೧೪೫ ಕೋಟಿ ಜನರು ಸುರಕ್ಷತೆ ಸುಭದ್ರತೆಯ ಭಾವದಿಂದ ಹಾಗೂ ಸೌಹಾರ್ಧತೆಯಿಂದ ನೆಮ್ಮದಿಯ ಬದುಕು ನಡೆಸುತ್ತಿದ್ದೇವೆ ಎಂದರೆ ಅದಕ್ಕೆ ಸ್ವಾತಂತ್ರ್ಯ ಮತ್ತು ನಮ್ಮ ಸಂವಿಧಾನ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಹಾತ್ಮಗಾಂದಿ, ವಲ್ಲಭಬಾಯಿ ಪಟೇಲರು, ನೇತಾಜಿ ಸುಭಾಷ್ ಚಂದ್ರಬೋಸ್, ಲಾಲ್ ಬಹುದ್ದೂರ್ ಶಾಸ್ತ್ರಿಯಂತ ಅನೇಕ ಮಹನೀಯರು, ದೇಶ ಭಕ್ತರು, ದಾರ್ಶನಿಕರು ಸ್ವಾತಂತ್ರ್ಯಕ್ಕಾಗಿ ತನು ಮನ ಧನವನ್ನು ಅರ್ಪಿಸಿ ಹುತಾತ್ಮರಾಗಿದ್ದಾರೆ ಅವರ ಹೋರಾಟದ ಫಲವಾಗಿ ಬಂದ ಸ್ವಾತಂತ್ರ್ಯವನ್ನು ನಾವು ಅನುಭವಿಸುತ್ತಿರುವ ಈ ಸುಸಮಯದಲ್ಲಿ ಅವರೆಲ್ಲರನ್ನೂ ನಾವು ಸ್ಮರಿಸಬೇಕು ಎಂದರು.

ನಾಡಿನ ಎಲ್ಲರಿಗೂ ಉತ್ತಮ ಆರೋಗ್ಯ ಸವಲತ್ತುಗಳು ಮತ್ತು ಉತ್ತಮ ಶಿಕ್ಷಣ ದೊರೆಯುವಂತಾಗಬೇಕು ಆ ನಿಟ್ಟಿನಲ್ಲಿ ಸರ್ಕಾರ, ಜನಪ್ರದಿನಿದಧಿಗಳು, ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಆಶಿಸಿದರು.

ತಹಸೀಲ್ದಾರ್ ಎನ್.ಗಗನ ಸಿಂಧು ಮಾತನಾಡಿ,
ನಮ್ಮ ಹಿರಿಯರ ತ್ಯಾಗ ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ನಾವು ಜತನದಿಂದ ಕಾಪಾಡಿಕೊಂಡು ರಕ್ಷಿಸಿಕೊಂಡು ಮುನ್ನೆಡೆಯಬೇಕಿದೆ ಎಂದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಎಲ್ಲರನ್ನೂ ನಾವು ಸ್ಮರಿಸಬೇಕು, ಸೌಹಾರ್ಧತೆಯಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ನಮ್ಮೆಲ್ಲರು ಪ್ರಾಮಾಣಿಕ ಪ್ರಯತ್ನ ಸಾಗಬೇಕೆಂದು ನುಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯಗಳನ್ನು ಕೋರಿದರು.
ಈ ವೇಳೆ ನಗರದ ಶಾಲಾ ವಿದ್ಯಾರ್ಥಿಗಳು, ಎನ್‌ಸಿಸಿ ವಿದ್ಯಾರ್ಥಿಗಳ ತಂಡ, ಪೊಲೀಸರು, ಗೃಹ ಇಲಾಖೆ ಸಿಬ್ಬಂದಿಯ ತಂಡ ಧ್ವಜ ವಂದನೆ ಸಲ್ಲಿಸಿದರು.

ವಿಕಲಚೇತನ ಮಕ್ಕಳಿಗೆ ದಿನ ನಿತ್ಯದ ಕಲಿಕೆ, ನಡೆದಾಡಲು ಅನುಕೂಲ ಆಗುವಂತ ಕಲಿಕಾ ಹಾಗೂ ದೈಹಿಕ ಚಟುವಟಿಕೆಗಳ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.

ಶಾಲಾ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಲಡ್ಡು ಸಿಹಿ ಹಂಚಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ವೆಂಕಟಸ್ವಾಮಿ, ಇಒ ಆರ್.ಹೇಮಾವತಿ, ನಗರಸಭೆ ಆಯುಕ್ತೆ ಜಿ.ಅಮೃತ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್, ಬಿಇಒ ನರೇಂದ್ರ ಕುಮಾರ್, ತಾಲ್ಲೂಕು ಆರೋಗ್ಯಾಕಾರಿ ಡಾ.ವೆಂಕಟೇಶ್‌ಮೂರ್ತಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ,ತಾದೂರು ರಘು, ಮೇಲೂರು ಮಂಜುನಾಥ್, ಲಕ್ಷ್ಮಣ ರಾಜು, ಭಕ್ತರಹಳ್ಳಿ ಬೈರೇಗೌಡ,ಬೆಳ್ಳೂಟಿ ಮುನಿಕೆಂಪಣ್ಣ,ಮುನೇಗೌಡ ಮತ್ತೀತರರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now