ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ 

ವಿಜಯ ದರ್ಪಣ ನ್ಯೂಸ್….

ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ

ಶಿಡ್ಲಘಟ್ಟ : ತಾಲ್ಲೂಕಿನ ಮೇಲೂರು ಗ್ರಾಮದ ಬಿ.ಎನ್. ರವಿಕುಮಾರ್ ರವರ ಸ್ವಗೃಹದಲ್ಲಿ ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶೆಟ್ಟಿಕೆರೆ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಯುವಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಬಿ.ಎನ್.ರವಿಕುಮಾರ್ ರವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷಕ್ಕೆ ಸೇರ್ಪಡೆಯಾದ ಹಲವು ಮುಖಂಡರು ಮಾತನಾಡಿ ಶಾಸಕ ಬಿ.ಎನ್.ರವಿಕುಮಾ‌ರ್ ಅವರ ಅಭಿವೃದ್ಧಿ ಕಾರ್ಯಗಳು, ಅವರ ಕಾರ್ಯ ವೈಕರಿ ಹಾಗು ಅಭಿವೃದ್ಧಿ ವಿಚಾರದಲ್ಲಿ ಪಕ್ಷಾತೀತವಾಗಿ ಯಾರೇ ಮನೆ ಬಾಗಿಲಿಗೆ ಹೋದರೂ ಸ್ಪಂಧಿಸುತ್ತಾರೆ ಜತೆಗೆ ಕ್ಷೇತ್ರದ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಅವರ ಸಮಾಜಮುಖಿ ಕಾರ್ಯಕ್ರಮಗಳನ್ನು ಮೆಚ್ಚಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶೆಟ್ಟಿಕೆರೆ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ದೇವರೆಡ್ಡಿ, ಹಾಗೂ ಮುಖಂಡರಾದ ಭರತೇಶ್,ಆನಂದ್,ರಾಮಾಚಾರಿ, ವಿನೋದ್,ನವೀನ್,ಅಂಬರೀಶ್,ಚಂದ್ರಶೇಖ‌ರ್ ಸೇರಿದಂತೆ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರಿಗೆ ಶಾಸಕರು ಸನ್ಮಾನಿಸಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ.ಶಿವಾರಡ್ಡಿ, ಗ್ರಾಮ ಪಂಚಾಯಿತಿ ಸದಸ್ಯರಾದ ಬೈರಾರೆಡ್ಡಿ ಜನುಮಡಗಪ್ಪ, ಕೃಷ್ಣಮೂರ್ತಿ, ವೆಂಕಟಾಚಲಪತಿ , ಜೆಡಿಎಸ್‌ ಮುಖಂಡರು ಹಾಜರಿದ್ದರು.

###################################

ಸೆಪ್ಟೆಂಬರ್ 17ರಂದು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ  ವಿಶ್ವಕರ್ಮ ಜಯಂತಿ ಆಚರಣೆ

ಶಿಡ್ಲಘಟ್ಟ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ
ತಾಲ್ಲೂಕು ವಿಶ್ವಕರ್ಮ ಸಮುದಾಯದಿಂದ ಸೆ.17ರಂದು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ “ವಿಶ್ವಕರ್ಮ ಜಯಂತಿ” ಯನ್ನು ಆಚರಿಸಲಾಗುತ್ತಿದೆ ಎಂದು ತಾಲ್ಲೂಕು ವಿಶ್ವಕರ್ಮ ಸಂಘದ ನಿರ್ದೇಶಕ ಸುಂದರಾಚಾರಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ವಿಶ್ವ ಕರ್ಮ ಜಯಂತಿಯಲ್ಲಿ ಸಮುದಾಯದ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಮತ್ತು ಪದವಿಯಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಹಾಗು ಪ್ರಮುಖವಾಗಿ ಕುಲ ಕಸಬು ಮಾಡುವ ಐದು ಮಂದಿ ಹಿರಿಯನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು.

ಶಾಸಕ ಬಿ.ಎನ್.ರವಿಕುಮಾರ್, ತಹಶೀಲ್ದಾರ್ ಗಗನ ಸಿಂಧು ಸೇರಿದಂತೆ ತಾಲ್ಲೂಕು ಆಡಳಿತವು ಜಯಂತಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ ,ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಮುಖಂಡರು, ಸಂಘ ಸಂಸ್ಥೆಗಳ ಪ್ರಮುಖರು, ಎಲ್ಲ ಸಮುದಾಯದ ಮುಖಂಡರು ಜಯಂತಿಯಲ್ಲಿ ಭಾಗವಹಿಸಲು ಅವರು ಮನವಿ ಮಾಡಿದರು.

ಶೇ 75ಕ್ಕಿಂತಲೂ ಹೆಚ್ಚು ಅಂಕ ಪಡೆದ ತಾಲ್ಲೂಕಿನ ಸಮುದಾಯದ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನಡೆಸಲಿದ್ದು ಅರ್ಹ ವಿದ್ಯಾರ್ಥಿಗಳು ಸುಂದರಾಚಾರಿ-97312 70250, ಶ್ರೀನಾಥ್-9538111910, ಮಂಜುನಾಥ್-90365 01413 ಮೊಭೈಲ್ ನಂ.ಗೆ ಸಂಪರ್ಕಿಸಲು ಮನವಿ ಮಾಡಿದರು.

ವಿಶ್ವಕರ್ಮ ಕ್ಷೇಮಾಭಿವೃದ್ದಿ ಸಂಘದ ತಾಲ್ಲೂಕು ಅಧ್ಯಕ್ಷ ಅಮರ ನಾರಾಯಾಣಚಾರಿ, ಶ್ರೀಕಾಳಿಕಾಂಬ ಕಮಠೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಮುನಿರತ್ನಾಚಾರಿ, ಸುಂದರಾಚಾರಿ, ಶ್ರೀನಾಥ್, ಬಿ.ವಿ.ಮಂಜುನಾಥ್, ಚಂದ್ರಶೇಖರ್ ಉಪಸ್ಥಿತರಿದ್ದರು.