ಜಿಲ್ಲೆಯ ಎಲ್ಲಾ ನಾಗರಿಕರು ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಸಿ.ಇ.ಒ ಡಾ.ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್….

ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರವರೆಗೆ ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನ

ಜಿಲ್ಲೆಯ ಎಲ್ಲಾ ನಾಗರಿಕರು ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಸಿ.ಇ.ಒ ಡಾ.ಕೆ.ಎನ್ ಅನುರಾಧ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಸೆ.16 : ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2025 ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆಂದೋಲನದಲ್ಲಿ ಪಾಲ್ಗೊಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್- 2 ನ್ನು ‘ಸ್ವಚ್ಛ ಭಾರತ ದಿನ’ವನ್ನಾಗಿ ಆಚರಿಸಲಾಗುತ್ತದೆ.

ಸ್ವಚ್ಛ ಭಾರತ ಅಭಿಯಾನದ 11ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಚತಾ ಹೀ ಸೇವಾ (ಎಸ್.ಎಚ್.ಎಸ್-2025) ಅಭಿಯಾನವನ್ನು ಸೆಪ್ಟೆಂಬರ್-17 ರಿಂದ ಅಕ್ಟೋಬರ್ 02 ವರೆಗೆ ಸ್ವಭಾವ್‌ ಸ್ವಚ್ಛತಾ- ಸಂಸ್ಕಾರ್ ಸ್ವಚ್ಛತಾ” ಎಂಬ ಧ್ಯೆಯದೊಂದಿಗೆ ಆಚರಿಸಲಾಗುತ್ತಿದೆ. ಈ ಅಭಿಯಾನವು ಸ್ವಚ್ಛತೆ ಹಾಗೂ ನೈರ್ಮಲ್ಯತೆಗಾಗಿ ಮಾಡಲಾಗುತ್ತಿದೆ.

ಈ ಅಭಿಯಾನವನ್ನು ಸಾರ್ವಜನಿಕರು ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಧಾರಣೆಗೆ ಪ್ರಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಎಲ್ಲೆಲ್ಲಿ ಕಸದ ರಾಶಿಗಳು ಇದೆ ಅವುಗಳನ್ನು ಸ್ವಚ್ಛತೆ ಮಾಡುವ ಮೂಲಕ , ನೈರ್ಮಲ್ಯ ಸಾಧಿಸಬೇಕು. ಹಾಗೆಯೇ ‘ಸ್ವಚ್ಛತಾ ಹೀ ಸೇವಾ ಆಂದೋಲನ’ದ ಭಾಗವಾಗಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯಲಿದೆ.

ಸ್ವಚ್ಛತಾ ಕಾರ್ಯಕ್ರಮಗಳು ಹಮ್ಮಿಕೊಂಡು ಕಾರ್ಯಕ್ರಮಗಳ ಪೋಟೋ, ವಿಡಿಯೋ ಗಳನ್ನು ಸ್ವಚ್ಛತಾ ಹೀ ಸೇವಾ ವೆಬ್ಸೈಟ್ https://swachhatahiseva.com ಲಿಂಕ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನ ಯಶಸ್ವಿಗೊಳಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

&&&&&&&&&&&&&&&&&&&&&&&&&&

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಬೈಕ್, ಸೈಕಲ್ ಜಾಥಾಗೆ ಚಾಲನೆ ನೀಡಿದ ಸಚಿವ ಕೆ.ಹೆಚ್ ಮುನಿಯಪ್ಪ

ಬೆಂ.ಗ್ರಾ.ಜಿಲ್ಲೆ, ಸೆಪ್ಟೆಂಬರ್.: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು‌ ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಪುತ್ತಳಿಗೆ ಗೌರವಪೂರ್ವಕ ಮಾಲಾರ್ಪಣೆ ಸಲ್ಲಿಸಿ ಬೈಕ್,ಸೈಕಲ್ ರ್ಯಾಲಿಗೆ ಚಾಲನೆ ನೀಡಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು
ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಇವರುಗಳ ಸಹಭಾಗಿತ್ವದಲ್ಲಿ “ನನ್ನ ಮತ-ನನ್ನ ಹಕ್ಕು” (My Vote-My Ritht) ಎನ್ನುವ ಧ್ಯೇಯ ವಾಕ್ಯದೊಂದಿಗೆ ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ , ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮ, ಇಒ ಶ್ರೀನಾಥ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮಂಜುನಾಥ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.