--Ads--

ಲೋಕಾಯುಕ್ತ ಸಂಸ್ಥೆಯಲ್ಲಿ ಎಸಿ, ತಹಶೀಲ್ದಾರ್ ಗಳ ಮೇಲೆ ಸ್ವಯಂಪ್ರೇರಿತ ದೂರು ದಾಖಲು

On: September 17, 2025 5:36 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಲೋಕಾಯುಕ್ತ ಸಂಸ್ಥೆಯಲ್ಲಿ ಎಸಿ, ತಹಶೀಲ್ದಾರ್ ಗಳ ಮೇಲೆ ಸ್ವಯಂಪ್ರೇರಿತ ದೂರು ದಾಖಲು

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಸೆ.17:-ಜಿಲ್ಲೆಯ ಸೈನಿಕರು, ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರಿರಿಗೆ ಹಾಗೂ ಅವಲಂಬಿತ ಕುಟುಂಬಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಲು ವಿಳಂಬ ಧೋರಣೆ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ಉಪವಿಭಾಗಾಧಿಕಾರಿ, ತಹಶೀಲ್ದಾರ್ ಗಳ ಮೇಲೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.

ಉಪವಿಭಾಗಾಧಿಕಾರಿ ದುರ್ಗಶ್ರೀ, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಎಂ, ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್ ಕೆ.ಎಸ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ನೆಲಮಂಗಲ ತಹಶೀಲ್ದಾರ್ ಶೀಥಲ್ ವಿ.ಎಸ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ನಿವೃತ್ತ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನಿಗದಿತ ಸಮಯದಲ್ಲಿ ನೀಡದೆ ಸರ್ಕಾರಿ/ಸಾರ್ವಜನಿಕ ನೌಕರ/ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವುದು ಹಾಗೂ ಕರ್ತವ್ಯಲೋಪ ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು ದೂರಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಇರುವುದರಿಂದ ಈ ಬಗ್ಗೆ ಕೂಲಂಕುಷವಾದ ತನಿಖೆಯ ಅವಶ್ಯಕತೆ ಇದೆ ಎಂದು ಲೋಕಾಯುಕ್ತ ಸಂಸ್ಥೆ ತಿಳಿಸಿದೆ.

WhatsApp

Join Now

Telegram

Join Now

Instagram

Join Now