ನವಂಬರ್.14 ರಂದು ಮಕ್ಕಳ ದಿನಾಚರಣೆ

ವಿಜಯ ದರ್ಪಣ ನ್ಯೂಸ್…

ನವೆಂಬರ್ .14 ರಂದು ಮಕ್ಕಳ ದಿನಾಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ  ಜಿಲ್ಲೆ, ನವೆಂಬರ್ 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯನ್ನು ನವೆಂಬರ್ 14 ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ನೆರವೆರಿಸಲ್ಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಮತ್ತು ಕರ್ನಾಟಕ ವಿದುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರ ಘನ ಉಪಸ್ಥಿತಿ ಇರಲಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಡಾ.ಕೆ ಸುಧಾಕರ್, ವಿಧಾನ ಪರಿಷತ್ತಿನ ಶಾಸಕ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು(ಎಂ.ಟಿ.ಬಿ),ರಾಮೋಜಿ ಗೌಡ, ದೊಡ್ಡಬಳ್ಳಾಪುರದ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್, ಸರ್ಕಾರದ ಕಾರ್ಯದರ್ಶಿಗಳು ಆರ್ಥಿಕ ಇಲಾಖೆ (ಆಯವ್ಯಯ ಮತ್ತು ಸಂಪನ್ಮೂಲ) ಆಡಳಿತಾಧಿಕಾರಿ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್, ದೇವನಹಳ್ಳಿ ಟೌನ್ ಪುರಸಭೆ ಅಧ್ಯಕ್ಷ ಮುನಿಕೃಷ್ಣ ಹಾಗೂ ಉಪಧ್ಯಕ್ಷ ರವೀಂದ್ರ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ ಎಂ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜಿನಪ್ಪ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ನಾಮನಿರ್ದೇಶಿತ ಸದಸ್ಯರು, ಎಲ್ಲಾ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರಸಭೆ ಮತ್ತು ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಯ ಎಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.