ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀಮಳ್ಳೂರಾಂಭದೇವಿಯ ರಥೋತ್ಸವ
ವಿಜಯ ದರ್ಪಣ ನ್ಯೂಸ್…
ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಮಳ್ಳೂರಾಂಭದೇವಿಯ ರಥೋತ್ಸವ

ಶಿಡ್ಲಘಟ್ಟ : ಪುರಾತನ ದೇವಾಲಯ ಶ್ರೀಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ದವಾಗಿದ್ದು, ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು,ದೇವರನ್ನು ವಿಶೇಷವಾಗಿ ಅಲಂಕರಿಸಿದ್ದರು.
ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಮಳ್ಳೂರಾಂಭದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು, ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಗಾರುಡಿಬೊಂಬೆ, ಕೀಲುಕುದುರೆ, ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು, ತಿಂಡಿ ತಿನಿಸುಗಳು, ಆಟಿಕೆಗಳು, ಅಚ್ಚೆ ಹಾಕುವವರು, ದಿನೋಪಯೋಗಿ ವಸ್ತುಗಳು ಸೇರಿದಂತೆ ಬಹುತೇಕ ಅಂಗಡಿಗಳು ತೆರೆದಿದ್ದು ಭಕ್ತಾದಿಗಳನ್ನು ಆಕರ್ಷಿಸಿದವು.
ತಹಶೀಲ್ದಾರ್ ಗಗನಸಿಂಧು ಮತ್ತು ಶಾಸಕರಾದ ಬಿ.ಎನ್.ರವಿಕುಮಾರ್ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ಕಾಂಗ್ರೆಸ್ ಮುಖಂಡ ಹಾಗು ಕೆ.ಪಿ.ಸಿ.ಸಿ ಕೋ ಆರ್ಡಿನೇಟರ್ ರಾಜೀವ್ ಗೌಡ, ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಮುನಿರಾಜುಗೌಡ, ಕಾರ್ಯದರ್ಶಿ ವಿ.ವೇಣುಗೋಪಾಲ, ವಿ.ಸುಬ್ರಮಣಿಯಪ್ಪ, ಬಿ.ಎಲ್.ಮುನಿರಾಜು,ಎಂ.ವೆಂಕಟೇಶಪ್ಪ, ಶಾಂತಮ್ಮ ಕೆಂಪಣ್ಣ, ಎಂ.ವೆಂಕಟೇಶ್, ಎನ್.ರಾಕೇಶ್, ದೇವರ ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರ ದೇವರಾಜ್, ಸದಸ್ಯರಾದ ಕೆಂಪೇಗೌಡ, ಎನ್, ವೆಂಕಟೇಶ್, ಅರ್ಚಕ ಹರೀಶ್ ಸ್ವಾಮಿ, ವೆಂಕೋಬರಾವ್,ಸೊಣ್ಣೇನಹಳ್ಳಿ ಮೂರ್ತಿ, ಕೆ.ನಾಗರಾಜು, ಜಿ.ಚಂದ್ರಪ್ರಸಾದ್ ಹಾಗು ಸುತ್ತ ಮುತ್ತಲಿನ ಗ್ರಾಮಸ್ಥರು ರಥೋತ್ಸವವದಲ್ಲಿ ಭಾಗವಹಿಸಿದ್ದರು.
&&&&&&&&&&&&&&&&&&&&&&&&&&
ಖುರ್ಚಿ’ ಕಿತ್ತಾಟದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರವು ಜನರ ಹಿತ ಕಾಪಾಡುವಲ್ಲಿ ವಿಫಲವಾಗಿದೆ

ಶಿಡ್ಲಘಟ್ಟ : ‘ಖುರ್ಚಿ’ ಕಿತ್ತಾಟದ ಗುಂಗಿನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಜನರ ಹಿತ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಗಂಭೀರವಾಗಿ ಆರೋಪಿಸಿದರು.
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ, ಬಿಜೆಪಿ ರೈತ ಮೋರ್ಚಾ ಹಾಗೂ ವಿವಿಧ ಘಟಕಗಳು ಜಂಟಿಯಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವುದರ ಕಾಲಹರಣದಿಂದಾಗಿ ರಾಜ್ಯದ ರೈತರ ಮತ್ತು ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸಲು ಸರ್ಕಾರಕ್ಕೆ ಪುರಸೊತ್ತಿಲ್ಲ, ವ್ಯವಧಾನವೂ ಇಲ್ಲದಂತಾಗಿದೆ ಎಂದು ಅವರು ದೂರಿದರು.
ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಇದೀಗ ರೈತರನ್ನು ಸಂಪೂರ್ಣವಾಗಿ ಮರೆತಿದೆ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಘೋಷಿಸಿದ್ದರೂ, ರಾಜ್ಯ ಸರ್ಕಾರವು ಮೆಕ್ಕೆ ಜೋಳದ ಖರೀದಿ ಕೇಂದ್ರಗಳನ್ನು ಈವರೆಗೂ ಆರಂಭಿಸಿಲ್ಲ,ರಾಜ್ಯ ಸರ್ಕಾರವು ಕಿವಿ ಕೇಳಿಸದ, ಮಾತನಾಡಲು ಬಾರದ ಸರ್ಕಾರದಂತೆ ವರ್ತಿಸುತ್ತಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಂಡಿ ಮತ್ತು ಡಿಸಿಎಂ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೋಳಿ ಮಾಂಸ ಸೇವಿಸುವುದರಲ್ಲಿ ತಲ್ಲೀನರಾಗಿದ್ದು, ರಾಜ್ಯದ ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುವಂತಹ ಈ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದರು.
ನೆರೆ ಸಂತ್ರಸ್ತರ ಪರಿಹಾರ ಮೊತ್ತವನ್ನು 5 ಲಕ್ಷ ರೂ.ಗಳಿಂದ 1 ಲಕ್ಷ ರೂ.ಗಳಿಗೆ ಕಡಿತಗೊಳಿಸಿರುವುದನ್ನು ಮತ್ತು ಜಂಗಮಕೋಟೆ ಹೋಬಳಿಯ ರೈತರ ಕೃಷಿ ಜಮೀನುಗಳನ್ನು ಕೆಐಡಿಬಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ಒತ್ತಾಯಿಸಿತು.
ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ತಹಶೀಲ್ದಾರ್ ಎನ್. ಗಗನ ಸಿಂಧು ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಇದಕ್ಕೂ ಮುನ್ನ, ಬಿಜೆಪಿ ಸೇವಾ ಸೌಧ ಕಚೇರಿಯಿಂದ ತಾಲ್ಲೂಕು ಕಚೇರಿಯವರೆಗೆ ಎತ್ತಿನ ಬಂಡಿಯಲ್ಲಿ ಆಗಮಿಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ವಿ.ರಾಜಶೇಖರ್, ಮಧು ಸೂರ್ಯನಾರಾಯಣ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷರಾದ ಆಂಜನೇಯಗೌಡ, ಗ್ರಾಮಾಂತರ ಮಂಡಲ ಅಧ್ಯಕ್ಷ, ಆನಂದ ಗೌಡ, ನಗರ ಮಂಡಲ ಅಧ್ಯಕ್ಷ ನರೇಶ್, ರೈತರು,ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
