ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಸಿದ್ದಗಂಗಾ ಶ್ರೀಗಳ 7ನೇ ವರ್ಷದ ಪುಣ್ಯಸ್ಮರಣೆ
ವಿಜಯ ದರ್ಪಣ ನ್ಯೂಸ್…..
ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಸಿದ್ದಗಂಗಾ ಶ್ರೀಗಳ 7ನೇ ವರ್ಷದ ಪುಣ್ಯಸ್ಮರಣೆ

: ತಾಂಡವಪುರ ಜನವರಿ 21 ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಶ್ರೀ ದಿ.ಶಿವಕುಮಾರ ಸ್ವಾಮೀಜಿಯವರ 7ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶ್ರೀರಾಮ ಗೆಳೆಯರ ಬಳಗದಿಂದ ದಾಸೋಹ ದಿನ ಆಚರಣೆ ಮೂಲಕ ನಡೆಸಲಾಯಿತು.
ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಪುಷ್ಪ ನಮನ ಸಲ್ಲಿಸಿದರು. ಬಳಗದ ಅಧ್ಯಕ್ಷ ಸಂದೀಪ್ ಚಂದ್ರಶೇಖರ್ ಮಾತನಾಡಿ, “ನಡೆದಾಡುವ ದೇವರು, ಅಭಿನವ ಬಸವಣ್ಣ ಎಂದೇ ಖ್ಯಾತರಾಗಿದ್ದ ಸಿದ್ದಗಂಗಾ ಶ್ರೀಗಳ ಬದುಕು ನಮಗೆಲ್ಲರಿಗೂ ದಾರಿದೀಪ. ಅನ್ನದಾಸೋಹದ ಜೊತೆಗೆ ಶಿಕ್ಷಣ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳ ಬಾಳಿಗೆ ಬೆಳಕಾದ ಅವರ ಸಾಮಾಜಿಕ ಕಳಕಳಿ ಸಮಾಜಕ್ಕೆ ಎಂದೆಂದಿಗೂ ಆದರ್ಶ” ಎಂದು ಸ್ಮರಿಸಿದರು.
ಉದ್ಯಮಿ ಅಮರನಾಥ್ ರಾಜೇ ಅರಸ್, ಮುಖಂಡರಾದ ನಾಗರಾಜ್, ಜೋಗಿ ಮಂಜು, ಸೋಮಸುಂದರ್, ವಿದ್ಯಾ ಅರಸ್, ಜಗದೀಶ್ ಲಿಂಗಣ್ಣ, ಜೀವಧಾರ ರಕ್ತನಿಧಿ ಕೇಂದ್ರ ಗಿರೀಶ್, ಬಸವಣ್ಣ, ಕೆ.ಆರ್. ಬ್ಯಾಂಕ್ ಅಧ್ಯಕ್ಷ ಬಸಪ್ಪ, ಬಿಜೆಪಿ ಮುಖಂಡ ಜೋಗಿ ಮಂಜು, ಜೆಡಿಎಸ್ ಮುಖಂಡ ಪ್ರಕಾಶ್ ಪ್ರಿಯದರ್ಶಿನಿ, ಸೌಭಾಗ್ಯ ಮೂರ್ತಿ, ಮಂಜುಳಾ, ವಿಜಯಾ, ಪ್ರಕಾಶ್, ಮೋಹನ್, ಬಸವರಾಜ್, ಪ್ರಭು, ಸುರೇಶ್, ಮಹೇಶ್ ಅರಸ್, ಮರಿಸ್ವಾಮಿ, ಲಲಿತಾಂಬ, ದೇವೇಂದ್ರ ಸ್ವಾಮಿ, ರಾಜೇಂದ್ರ, ಶಿವಕುಮಾರ್, ಗುರುಬಸಪ್ಪ, ಪಾರ್ವತಿ, ಕಿರಣ್, ಲತಾ, ಶಿವಶಂಕರ್, ಗಾಯಿತ್ರಿ, ಸಂತೋಷ್, ಕುಶಾಲ್, ಗಿರೀಶ್, ಅನೂಪ್, ದೀಪಕ್, ರಿಂಕು, ಮಧುರಾ, ಶೇಖರ್, ಶಿವಪ್ರಸಾದ್, ರಮೇಶ್, ರಾಜಣ್ಣ, ಯೋಗೇಶ್ ಯಾದವ್, ಮೈಸೂರು ಆನಂದ್ ಸೇರಿದಂತೆ ಅನೇಕ ಶ್ರೀಗಳ ಭಕ್ತರು ಹಾಜರಿದ್ದರು
ಸಚಿವ ಡಾಕ್ಟರ್ ಹೆಚ್ ಸಿ ಮಹದೇವಪ್ಪ ಅವರಿಂದ ಮುಡುಕುತೊರೆ ಜಾತ್ರೆಯ ಪೋಸ್ಟರ್ ಬಿಡುಗಡೆ
ತಾಂಡವಪುರ ಜನವರಿ 21: ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಜ.22 ರಿಂದ 31 ರವರೆಗೆ ಆಯೋಜಿಸಿರುವ ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮದ ಪೋಸ್ಟರ್ ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಮುಡುಕುತೊರೆ ದೇವಸ್ಥಾನಕ್ಕೆ ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾಗಿದ್ದು, ವಿಜೃಂಭಣೆಯಿಂದ ಜರುಗುವ ಜಾತ್ರೆಗೆ ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಜಾತ್ರೆಯು ಜ.21ರಿಂದ ಪ್ರಾರಂಭವಾಗಿದ್ದು, 28 ರಂದು ಭ್ರಹ್ಮರಥೋತ್ಸವ, 31ರಂದು ತೆಪ್ಪೋತ್ಸವ ಹಾಗೂ ಫೆ.4ರಂದು ಗಿರಿಪ್ರದಕ್ಷಿಣೆ ನಡೆಯಲಿದೆ. ಫೆ.6ರಂದು ನಡೆಯುವ ಮಹಾಭಿಷೇಕದೊಂದಿಗೆ ಜಾತ್ರೆಯು ಸಂಪನ್ನಗೊಳ್ಳಲಿದೆ.
ಈ ಸಂದರ್ಭದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಗೋಪಾಲ್, ರವಿಕುಮಾರ್, ಆಪ್ತಸಹಾಯಕ ಶ್ರೀನಿವಾಸ್, ತಲಕಾಡು ವೈಧ್ಯನಾಥೇಶ್ವರ ಸಮೂಹ ದೇವಾಲಯ ಸಮಿತಿ ಅಧ್ಯಕ್ಷ ನಾಗರಾಜು, ಲೋಕೇಶ್, ಮಾದೇಶ್, ಶಾಂತರಾಜು ಸೇರಿ ಹಲವರು ಉಪಸ್ಥಿತರಿದ್ದರು.

