ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ
ವಿಜಯ ದರ್ಪಣ ನ್ಯೂಸ್…
ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ
ಮಹಾತ್ಮ ಗಾಂಧೀಜಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಸಂಗೊಳ್ಳಿ ರಾಯಣ್ಣನವರ ಸ್ಮರಣೆ

ತಾಂಡವಪುರ ಜನವರಿ 26 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ 77 ವರ್ಷದ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ದೇಶಕ್ಕಾಗಿ ಹೋರಾಡಿದ ಮಹಾತ್ಮರಾದ ಮಹಾತ್ಮ ಗಾಂಧೀಜಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರನ್ನು ಸ್ಮರಿಸಿಕೊಂಡರು
ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗಮ್ಮ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ ಲೆಕ್ಕ ಸಹಾಯಕ ಎಸ್ ಪುಟ್ಟರಾಜು ಗ್ರಾಮ ಪಂಚಾಯತ್ ಸದಸ್ಯರಾದ ಸಿಎನ್ ಚಂದ್ರು ಎನ್ ಚಂದ್ರು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಮಹಾತ್ಮರಿಗೆ ಪೂಜೆ ಸಲ್ಲಿಸಿ ಗೌರವಿಸಿದರು
ಬಳಿಕ ಮಾತನಾಡಿದ ಗ್ರಾಮ ಪಂಚಾಯತ ಸದಸ್ಯರಾದ ಸಿ ಎನ್ ಚಂದ್ರು ಎನ್ ಚಂದ್ರುರವರು ನಮ್ಮ ದೇಶಕ್ಕೆ ಸ್ವಾತಂತ್ರ್ಯದ ನಂತರ ಗಣತಂತ್ರ ಗಣರಾಜ್ಯೋತ್ಸವ 77 ವರ್ಷವಾಗಿದ್ದು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಡಿದ ಮಹಾತ್ಮರಾದ ಮಹಾತ್ಮ ಗಾಂಧೀಜಿ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿಆರ್ ಅಂಬೇಡ್ಕರ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ನಾವು ಕೂಡ ಅವರಲ್ಲಿ ಒಬ್ಬರಾಗಿ ದೇಶದ ಉತ್ತಮ ಪ್ರಜೆಗಳಾಗೋಣ ಎಂದು ಮಹಾತ್ಮರನ್ನು ಸ್ಮರಿಸಿಕೊಂಡರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಾಗಮ್ಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ ಲೆಕ್ಕ ಸಹಾಯಕ ಎಸ್ ಪುಟ್ಟರಾಜು, ಗ್ರಾಮ ಪಂಚಾಯಿತಿಯ ಸದಸ್ಯರಾದ ಸಿಎನ್ ಚಂದ್ರು ಎನ್ ಚಂದ್ರು ಮುಖಂಡರಾದ ಮಹದೇವು ಗಾಣಿಗ ಹಾಗೂ ಸಿಬ್ಬಂದಿ ವರ್ಗದವರು ಪೌರ ಕಾರ್ಮಿಕರು. ಮುಂತಾದವರು ಹಾಜರಿದ್ದರು.

