ಅಮೂಲ್ಯ ಜೀವಗಳು ಉಳಿಸಲು ಹೆಲ್ಮೆಟ್ ಧರಿಸಿ: ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ

ವಿಜಯ ದರ್ಪಣ ನ್ಯೂಸ್….

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಗೆ

ಅಮೂಲ್ಯ ಜೀವಗಳು ಉಳಿಸಲು ಹೆಲ್ಮೆಟ್ ಧರಿಸಿ: ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ

ತಾಂಡವಪುರ ಜನವರಿ 30ಪೋಲಿಸಿನವರಿಂದ ದಂಡ ತಪ್ಪಿಸಲು ಮಾತ್ರ ಹೆಲ್ಮೆಟ್ ಹಾಕಬೇಕು ಎನ್ನುವುದು ತಪ್ಪು.ಅಪಘಾತಗಳಿಂದ ಅಮ್ಮ ಅಮೂಲ್ಯ ಜೀವಿಗಳು ಉಳಿಯಲು ಹೆಲ್ಮೆಟ್ ಧರಿಸಿ ಪ್ರಾಣ ರಕ್ಷಿಸಿಕೊಳ್ಳಿ ಎಂದು ಮೈಸೂರು ಜಿಲ್ಲಾ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಅವರು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವಸರ್ಕಾರಿ ನಾಗಮ್ಮ ಶಾಲಾ ಆವರಣದಲ್ಲಿ ಶುಕ್ರವಾರ ಮೈಸೂರು ಜಿಲ್ಲಾ ಪೊಲೀಸ್, ನಂಜನಗೂಡು ಉಪ ವಿಭಾಗ, ಸಂಚಾರ ಪೊಲೀಸ್ ಠಾಣೆ ನಂಜನಗೂಡು ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಷ್ಟ್ರೀಯ ರಸ್ತೆ ಸುರಕ್ಷತೆ ಮತ್ತು ಮಾಸಾಚರಣೆ ಅಂಗವಾಗಿ ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಶಾಲಾ- ಕಾಲೇಜಿನ ವಿದ್ಯಾರ್ಥಿಗಳ ಮೂಲಕ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಹೆಲ್ಮೆಟ್ ಧರಿಸಿದೆ ಪ್ರಯಾಣ ಮಾಡುವುದು, ವಾಹನಚಾಲನೆ ಮಾಡುವಾಗ ಮೊಬೈಲ್ ಉಪಯೋಗಿಸುವುದು. ಹೀಗೆ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡುಬರುತ್ತದೆ. ಸಾಕಷ್ಟು ಜನರು ಕೂಡ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಮತ್ತು ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ. ಪ್ರತಿನಿತ್ಯ ಸಾಕಷ್ಟು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಾವು ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಬಳಿಕ ನಗರದ ಜೆಎಸ್ಎಸ್ ಕಾಲೇಜಿನಲ್ಲಿ ವೇದಿಕೆ ಕಾರ್ಯಕ್ರಮವನ್ನು ಎ ಎಸ್ ಪಿ ಮಲ್ಲಿಕ್ ಶ್ರೀ ಶಿವರಾತ್ರೀಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ಕಡೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈಗಾಗಲೇ ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಸವಾರರಿಗೆ 30 ಲಕ್ಷ ದಂಡ ವಿಧಿಸಲಾಗಿದೆ. ಅಪಘಾತ ಪ್ರಕರಣಗಳನ್ನು ತಡೆಗಟ್ಟಬೇಕು.

ಸಿಸಿ ಕ್ಯಾಮೆರಾ ಮತ್ತು ಪೊಲೀಸ್ ಇದ್ದಾರೆ ಎಂದು ಹೆಲ್ಮೆಟ್ ಹಾಕುವುದಲ್ಲ. ನಮ್ಮ ಜೀವವನ್ನು ಕಾಪಾಡಿಕೊಳ್ಳಲು ಹೆಲ್ಮೆಟ್ ಧರಿಸುವುದು ನಮ್ಮ ಕರ್ತವ್ಯವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 400 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಯಾವುದೇ ಜೀವಕ್ಕೂ ಹಾನಿಯಾಗಬಾರದು. ಅಮೂಲ್ಯ ಜೀವಗಳನ್ನು ರಕ್ಷಿಸಬೇಕು.

ಇತ್ತಿಚಿನ ದಿನಗಳಲ್ಲಿ ಹೆಚ್ಚಾಗಿ ಅಪಘಾತದಲ್ಲಿ ಸಾವಿನ ಪ್ರಮಾಣ ಏರಿಕೆಯಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಬೈಕ್ ಕೊಡಬಾರದು. ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅಪಘಾತದಿಂದಾಗುವ ಪ್ರಕರಣಗಳಿಂದ ವಿದ್ಯಾರ್ಥಿಗಳ ಜೀವನ ಹಾಳಾಗುತ್ತದೆ. ಹಾಗಾಗಿ
ಅಮೂಲ್ಯ ಜೀವಗಳನ್ನು ಉಳಿಸುವುದು ನಮ್ಮ ಕರ್ತವ್ಯವಾಗಿದೆ.

ನಂಜನಗೂಡಿನಲ್ಲಿ ವರ್ಷಕ್ಕೆ 150 ರಿಂದ 200 ರಷ್ಟು ಅಪಘಾತ ಪ್ರಕರಣಗಳು ನಡೆಯುತ್ತಿದೆ. ಹಾಗೆಯೇ ಅಪಘಾತದಲ್ಲಿ 100 ಮಂದಿ ಸಾವನ್ನಪ್ಪುತ್ತಿದ್ದಾರೆ. ಮೈಸೂರಿನಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ 1000 ಕ್ಕೆ ಏರಿಕೆಯಾಗಿದೆ.

ರಸ್ತೆ ದಾಟುವಾಗ ಎಚ್ಚರಿಕೆ ವಹಿಸಬೇಕು. ವಾಹನ ಸವಾರರು ಕಡ್ಡಾಯವಾಗಿ ಡಿಎಲ್, ಇನ್ಸೂರೆನ್ಸ್ ಮತ್ತು ಅಗತ್ಯ ದಾಖಲಾತಿಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಪತ್ರಕರ್ತರಿಗೆ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ವಿತರಿಸಿದರು.

ನಗರದ ಪ್ರಮುಖ ಬೀದಿಗಳಲ್ಲಿ ಸಾರ್ವಜನಿಕರಿಗೆ ಜಾಥಾ ಮೂಲಕ ಅರಿವು ಮೂಡಿಸಿ ಕೆಲ ದ್ವಿಚಕ್ರ ವಾಹನ ಸವಾರರಿಗೂ ಹೆಲ್ಮೆಟ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ರಘು, ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವಕರು ಮೊಬೈಲ್ ಬಳಕೆ ಹೆಚ್ಚು ಹೆಚ್ಚು ಮಾಡುತ್ತಿದ್ದೀರಿ ಇದನ್ನು ಕಡಿಮೆ ಮಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಎಷ್ಟು ಬೇಕೋ ಅಷ್ಟು ಮಾತ್ರ ಬಳಕೆ ಮಾಡಿ ದ್ವಿಚಕ್ರ ವಾಹನಗಳ ಚಲಿಸುವಾಗ ಮೊಬೈಲ್ ಬಳಕೆ ಮಾಡಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು

ಕಾರ್ಯಕ್ರಮದಲ್ಲಿ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿಎಂ ರವೀಂದ್ರ, ಜೆಎಸ್ಎಸ್ ಕಾಲೇಜಿನ ಪ್ರಾಂಶುಪಾಲ ಹೊನ್ನೇಗೌಡ, ಶಿವಕುಮಾರ್, ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಕೃಷ್ಣಕಾಂತ ಕೋಳಿ, ಹುಲ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಚೇತನ್ ಕುಮಾರ್, ಎಸ್.ಬಿ ತಿಮ್ಮಯ್ಯ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.