--Ads--

ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು

On: February 3, 2026 10:09 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ಅಧಿಕಾರಿಗಳು ಮುಂದಾಗಬೇಕು : ಜಿಲ್ಲಾಧಿಕಾರಿ ಜಿ.ಪ್ರಭು

ಶಿಡ್ಲಘಟ್ಟ : ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎಂದು ಕರೆಯುತ್ತಾರೆ ಹಾಗಾಗಿ ಜಿಲ್ಲಾಧ್ಯಂತ ಇರುವ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.

ನಗರದ ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭೂ ದಾಖಲೆಗಳ ಗಣಕೀಕರಣ ಕಾರ್ಯ ಪರಿಶೀಲನೆ ನಡೆಸಿ ನಂತರ ನಾಗರೀಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ನಾಗರೀಕರನ್ನು ವಿನಾಕಾರಣ ಕಚೇರಿಗೆ ಅಲೆದಾಡಿಸುವುದನ್ನು ಬಿಟ್ಟು ನೈಜವಾಗಿ ಜನಸಾಮಾನ್ಯರ ಪರವಾಗಿ ಕೆಲಸ ಮಾಡಲು ಕಂದಾಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಹೇಳಿದರು.

ಕಚೇರಿಯಲ್ಲಿ ಕಡತಗಳ ನಿರ್ವಹಣೆ ಸೇರಿದಂತೆ ಹಾಜರಾತಿ ನಿರ್ವಹಣೆ ಮಾಡಬೇಕು. ಕಚೇರಿಗೆ ಬರುವ ನಾಗರೀಕರೊಂದಿಗೆ ಸೌಜನ್ಯವಾಗಿ ನಡೆದುಕೊಳ್ಳಬೇಕು. ನಾಗರೀಕರಿಂದ ಬಂದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಸೂಚಿಸಿದರು.

ಕಡ್ಡಾಯವಾಗಿ ಕುಂದುಕೊರತೆ ಸಭೆ ಆಯೋಜಿಸುವಂತೆ ತಹಸೀಲ್ದಾರರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಅಗತ್ಯ ಬಿದ್ದಲ್ಲಿ ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಸಹ ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಿ ಜನರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದರು.

ಈಗಾಗಲೇ ಭೂದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆ ಜಿಲ್ಲಾಧಯಂತ ನಡೆಯುತ್ತಿದ್ದು ಮುಂದಿನ ಎರಡು ತಿಂಗಳ ಒಳಗೆ ಶಿಡ್ಲಘಟ್ಟ ತಾಲ್ಲೂಕಿನ ಎಲ್ಲಾ ಮೂಲ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಳ್ಳಲಿದೆ. ರೈತರು ತಾಲ್ಲೂಕು ಕಚೇರಿಗೆ ಬರುವ ಬದಲಿಗೆ ತಾವಿದ್ದಲ್ಲಿಯೇ ಭೂ ದಾಖಲೆಗಳನ್ನು ಪಡೆದುಕೊಳ್ಳುವ ಕೆಲಸ ತ್ವರಿತವಾಗಿ ಆಗಲಿದೆ ಎಂದರು.

ನಗರದಲ್ಲಿರುವ ಎಲ್ಲಾ ಸಾರ್ವಜನಿಕ ಆಸ್ತಿಗಳ ನಿರ್ವಹಣೆ ಹಾಗು ಸಂರಕ್ಷಣೆ ಅತಿ ಮುಖ್ಯ, ನಗರಸಭೆ ಸಮರ್ಪಕವಾಗಿ ನಡೆಯಬೇಕಾದರೆ ಸಂಪನ್ಮೂಲವೂ ಅಷ್ಟೇ ಮುಖ್ಯ ಎಂದ ಅವರು ಸ್ವಯಂ ಘೋಷನೆಯೊಂದಿಗೆ ಕಮರ್ಷಿಯಲ್ ಜಾಗಕ್ಕೆ ಮನೆಯ ತೆರಿಗೆ ಕಟ್ಟುವುದು, ೨೦೦೦ ಅಡಿ ಜಾಗವಿದ್ದರೆ ೧ ಸಾವಿರ ಅಡಿ ಜಾಗಕ್ಕೆ ಮಾತ್ರ ತೆರಿಗೆ ಕಟ್ಟುವುದು ಗಮನಕ್ಕೆ ಬಂದಿದೆ ಹಾಗಾಗಿ ಮೊದಲನೆ ಹಂತದಲ್ಲಿ ಎಲ್ಲಾ ವಾಣಿಜ್ಯ ಕಟ್ಟಡಗಳ ಪರಿಶೀಲನೆ ಕಾರ್ಯ ನಡೆಸಲಿದ್ದೇವೆ,

ಈ ಹಿಂದೆ ಅವರು ಕಟ್ಟಿರುವ ತೆರಿಗೆ ಪರಿಶೀಲನೆ ನಡೆಸಿ ಕಟ್ಟಬೇಕಾದ ತೆರಿಗೆ ಹಣ ಕಟ್ಟಿಸಿಕೊಳ್ಳಲಾಗುವುದು. ಒಂದಷ್ಟು ತೆರಿಗೆ ಹಣ ಬಂದರೆ ನಗರಸಭೆಗಳನ್ನು ಮೌಲ್ಯಯುತವಾಗಿ ನಡೆಸಲು ಸಾಧ್ಯವಾಗುತ್ತದೆ ,ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಸ್ವೀಕರಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ನಿಗಧಿತ ಅವಧಿಯೊಳಗೆ ವಿಲೇವಾರಿಗೊಳಿಸಲು ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಬದಲ್ಲಿ ತಹಸೀಲ್ದಾರ್ ಎನ್.ಗಗನಸಿಂಧೂ, ಗ್ರೇಡ್-೨ ತಹಸೀಲ್ದಾರ್ ಕೆ.ಎನ್.ಎಂ.ಮಂಜುನಾಥ್ ಸೇರಿದಂತೆ ರಾಜಸ್ವ ನಿರೀಕ್ಷಕರರು ಹಾಗು ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು.

WhatsApp

Join Now

Telegram

Join Now

Instagram

Join Now