ಫೆಬ್ರವರಿ 6 ರಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆರಂಭ

ವಿಜಯ ದರ್ಪಣ ನ್ಯೂಸ್……

ಫೆಬ್ರವರಿ 6 ರಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆರಂಭ

ಮೈಸೂರು ತಾಂಡವಪುರ ಫೆಬ್ರವರಿ 4:  ಕರ್ನಾಟಕ ರಾಜ್ಯ ಮಟ್ಟದ ಕುಸ್ತಿ ಸಂಘ ಹಾಗೂ ಜಿಲ್ಲಾ ಸಂಘಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ  6 ರಿಂದ 8 ರವರೆಗೆ ನಂಜನಗೂಡಿನ ಊಟಿ ರಸ್ತೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟನಾ ಅಧ್ಯಕ್ಷ ಪೈ.ಪ್ರಸನ್ನ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತ ಸಂಘದ ಭವನದಲ್ಲಿ ಸುದ್ದಿಗಾರರೊಡನೆ ಮಾತನಾಡಿ, ಸಂಸದ ಸುನಿಲ್ ಬೋಸ್ ಹಾಗೂ ಶಾಸಕ ದರ್ಶನ್ ಧ್ರುವನಾರಾಯಣ ಸಾರಥ್ಯ ವಹಿಸಿದ್ದಾರೆ. ಅಧಿಕೃತವಾಗಿ ಫೆಬ್ರವರಿ 7 ರ ಬೆಳಗ್ಗೆ 11 ಕ್ಕೆ ಜ್ಞಾನಪ್ರಕಾಶ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸುನಿಲ್ ಬೋಸ್, ದರ್ಶನ್ ಧ್ರುವನಾರಾಯಣ್, ಡಾ. ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದರು.

ಸಮಾರೋಪ ಸಮಾರಂಭ ಫೆಬ್ರವರಿ 8 ರ ಸಂಜೆ 4ಕ್ಕೆ ನಡೆಯಲಿದೆ. ಡಾ.ಎಚ್.ಸಿ. ಮಹದೇವಪ್ಪ, ಸುನಿಲ್ ಬೋಸ್, ದರ್ಶನ್ ಧ್ರುವನಾರಾಯಣ್ ಇನ್ನಿತರರು ಅತಿಥಿಗಳಾಗಿರುವರು.

ಈ ಪಂದ್ಯಾವಳಿಯಲ್ಲಿ ರಾಜ್ಯದ ಎಲ್ಲೆಡೆಯಿದ ಸುಮಾರು ಕುಸ್ತಿ ಪಟುಗಳು ಆಗಮಿಸಲಿದ್ದಾರೆ. ಇಲ್ಲಿ ವಿಜೇತರಾದವರು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ನೇರವಾಗಿ ಆಯ್ಕೆಯಾಗಲಿದ್ದಾರೆ. ವಿಜೇತರೆಲ್ಲರಿಗೂ ಗದೆ ಹಾಗೂ ನಗದು ಬಹುಮಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಮಹದೇವಮೂರ್ತಿ, ಗ್ರಾಮ ಪಂಚಾಯತ್ ಸದಸ್ಯ ಹಾಗೂ ಗ್ರಾಮ ಪಂಚಾಯಿತಿಗಳ ಒಕ್ಕೂಟದ ತಾಲೂಕು ಅಧ್ಯಕ್ಷ ತೊರೆಮಾವು ಟಿಡಿ ಗಿರೀಶ್ ಡಾ.ಕೆ. ವಿನೋದ್‌ಕುಮಾರ್, ರ‍್ಯಾಂಬೋ ಕಿರಣ್, ಶ್ರೀಕಂಠ ಪ್ರಸಾದ್ ಹಾಜರಿದ್ದರು.