ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ವಿಜಯ ದರ್ಪಣ ನ್ಯೂಸ್…..
ರೇಷ್ಮೆ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆಬ್ರವರಿ 04:
ರೇಷ್ಮೆಇಲಾಖೆ ವತಿಯಿಂದ 2023-24 ಹಾಗೂ 2024-25ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಗತಿ ಪರ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ರೇಷ್ಮೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ರೇಷ್ಮೆಬೆಳೆಗಾರರು ಕನಿಷ್ಠ 1.00 ಎಕರೆ ಹಿಪ್ಪುನೇರಳೆ ವಿಸ್ತೀರ್ಣ ಹೊಂದಿರಬೇಕು. ಪ್ರತ್ಯೇಕ ಹುಳುಸಾಕಾಣಿಕಾ ಮನೆ ಹೊಂದಿರಬೇಕು. 100 ರೇಷ್ಮೆ ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ.ಗಿಂತ ಕಡಿಮೆ ಇರಬಾರದು. ಒಂದು ಎಕರೆಗೆ ರೇಷ್ಮೆ ಗೂಡಿನ ಸರಾಸರಿ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ಕನಿಷ್ಟ 2 ದ್ವಿತಳಿ ಬೆಳೆ ಬೆಳೆದಿರಬೇಕು. ರೇಷ್ಮೆಬೆಳೆಗಾರರು ಆಯಾ ವರ್ಷದ ರೇಷ್ಮೆ ಪಾಸ್ ಪುಸ್ತಕ, ರೇಷ್ಮೆ ಮೊಟ್ಟೆ / ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆಗೂಡು ಮಾರಾಟ ಮಾಡಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಹೊಂದಿರಬೇಕು.
ಈ ಎಲ್ಲಾ ಅರ್ಹತೆ ಹೊಂದಿರುವ ರೇಷ್ಮೆ ಬೆಳೆಗಾರರು ಆಯಾ ತಾಲೂಕಿನ ಸ್ಥಳೀಯ ರೇಷ್ಮೆ ಕೃಷಿ ವಿಸ್ತರಣಾಧಿಕಾರಿಗಳು/ ರೇಷ್ಮೆ ಸಹಾಯಕ ನಿರ್ದೇಶಕರವರ ಕಛೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು 07-02-2026 ರೊಳಗೆ ಅರ್ಜಿ ಪಡೆದ ಕಛೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
###################################
ಬೆಣ್ಣೆಹಣ್ಣು ಮತ್ತು ಮೆಕಡೇಮಿಯ ಹಣ್ಣಿನ ವೈಜ್ಞಾನಿಕ ಬೇಸಾಯ ಪದ್ದತಿಯ ಕುರಿತು ವಿಚಾರ ಸಂಕೀರಣ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆಬ್ರವರಿ 04:
ತೋಟಗಾರಿಕೆ ಇಲಾಖೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ, ಕಸಬಾ ಹೋಬಳಿಯ ಅಣ್ಣೇಶ್ವರ ಗ್ರಾಮ ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ದಿನಾಂಕ:11.02.2026 ರಂದು ಬೆಳಿಗ್ಗೆ11.00 ಗಂಟೆಗೆ “ಬೆಣ್ಣೆಹಣ್ಣು ಮತ್ತು ಮೆಕಡೇಮಿಯ ಹಣ್ಣಿನ ವೈಜ್ಞಾನಿಕ ಬೇಸಾಯ ಪದ್ದತಿಯ ಕುರಿತು ವಿಚಾರ ಸಂಕೀರಣ” ಹಮ್ಮಿಕೊಳ್ಳಲಾಗಿದೆ.

ವಿಚಾರ ಸಂಕೀರಣದಲ್ಲಿ ವಿಷಯ ತಜ್ಞರಾಗಿ ನಿವೃತ್ತ ತೋಟಗಾರಿಕೆ ಅಪರ ನಿರ್ದೇಶಕರು ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಡಾ. ಹಿತ್ತಲಮನಿ ಎಸ್.ವಿ ರವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಜಿಲ್ಲೆಯ ಎಲ್ಲಾ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಲು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

&&&&&&&₹₹₹₹₹₹₹&&&&&೫೫೫₹₹₹₹₹₹₹
ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಫೆಬ್ರವರಿ .04:
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಫೆಬ್ರವರಿ 13 ವರೆಗೆ ಅವಧಿ ವಿಸ್ತರಿಸಲಾಗಿದೆ.
ಖಾಲಿ ಇರುವ ನಗರಸಭೆ/ಗ್ರಾಮ ಪಂಚಾಯಿತಿಗಳ ವಿವರ: ನೆಲಮಂಗಲದಲ್ಲಿ ದೊಡ್ಡಬೆಲೆ, ಸೋಲದೇವನಹಳ್ಳಿ, ನರಸೀಪುರ, ಹಸಿರುವಳ್ಳಿ ಗ್ರಾಮ ಪಂಚಾಯಿತಿಗಳು. ದೊಡ್ಡಬಳ್ಳಾಪುರದಲ್ಲಿ ಹಣಬೆ, ಹೆಗ್ಗಡಹಳ್ಳಿ ಹಾಗೂ ಕೆಸ್ತೂರು ಗ್ರಾಮ ಪಂಚಾಯಿತಿಗಳು. ದೇವನಹಳ್ಳಿಯಲ್ಲಿ ಜಾಲಿಗೆ, ಕನ್ನಮಂಗಲ ಹಾಗೂ ಅವತಿ ಗ್ರಾಮ ಪಂಚಾಯಿತಿಗಳು. ಹೊಸಕೋಟೆಯಲ್ಲಿ ಓರೋಹಳ್ಳಿ ಗ್ರಾಮ ಪಂಚಾಯಿತಿ.
ಹೊಸಕೋಟೆ ಟೌನ್-ನಗರಸಭೆ-01 ಹುದ್ದೆ, ದೊಡ್ಡಬಳ್ಳಾಪುರ ಟೌನ್-ನಗರಸಭೆ-01 ಹುದ್ದೆ.
ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಹುದ್ದೆ ನಿಗದಿಪಡಿಸಿದ್ದು, ಈ ಹಿಂದೆ ಅರ್ಜಿ ಸಲ್ಲಿಸಲು ಜನವರಿ 23 ಕೊನೆಯ ದಿನವಾಗಿತ್ತು. ಆಸಕ್ತ ವಿಕಲಚೇತನ ಅಭ್ಯರ್ಥಿಗಳು ಷರತ್ತುಗಳಿಗೊಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ದಿನಾಂಕ:13.02.2026 ರೊಳಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ, ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ,ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇಲ್ಲಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
