--Ads--

ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

On: February 20, 2026 6:17 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು , ಫೆಬ್ರವರಿ 20, :

ಬೆಂಗಳೂರು ಭೇಟಿಗಾಗಿ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof ಅವರು ನಿನ್ನೆ ಫೆಬ್ರವರಿ 19 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು.

ಗೌರವಾನ್ವಿತ ನೆದರ್‌ಲ್ಯಾಂಡ್ಸ್ ನ ಪ್ರಧಾನಿಗಳು ಇಂದು ಆರ್.ಟಿ. ನಗರದಲ್ಲಿರುವ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್ (Philips Innovation Campus), ಇನ್ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ಸಂಚಾರ ಪೊಲೀಸ್ ನಿಯಂತ್ರಣ ಕೇಂದ್ರಕ್ಕೆ (BTP Control Centre), ಭಾರತೀಯ ವಿಜ್ಞಾನ ಸಂಸ್ಥೆ (IISc) ಗೆ ಭೇಟಿ ನೀಡಿ ನಂತರ ಬೆಂಗಳೂರಿನ ಉದ್ಯಮಿಗಳೊಂದಿಗೆ ಹೋಟೆಲ್ ಫೋರ್ ಸೀಸನ್ಸ್‌ನಲ್ಲಿ ಮಧ್ಯಾಹ್ನದ ಭೋಜನ ಸಭೆ ನಡೆಸಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಅಮ್ ಸ್ಟರ್ ಡ್ಯಾಮ್ ಗೆ ಪ್ರಯಾಣ ಬೆಳೆಸಿದರು.

ಗೌರವಾನ್ವಿತ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳನ್ನು ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಕೆ. ಜಿ ಜಗದೀಶ್, ಬೆಂಗಳೂರು ಪ್ರಾದೇಶಿಕ ಪಾಸ್ ಪೋರ್ಟ್ ಅಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now