--Ads--

ಪಂಚಾಯಿತಿಗಳ ಆದಾಯ ಸದ್ಬಳಕೆ ಆಗಬೇಕು: ಸಚಿವ ಕೆ.ಹೆಚ್ ಮುನಿಯಪ್ಪ ಅಭಿಮತ

On: February 21, 2026 11:30 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಅಣ್ಣೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸವಲತ್ತು ವಿತರಣೆ ಕಾರ್ಯಕ್ರಮ

ಪಂಚಾಯಿತಿಗಳ ಆದಾಯ ಸದ್ಬಳಕೆ ಆಗಬೇಕು: ಸಚಿವ ಕೆ.ಹೆಚ್ ಮುನಿಯಪ್ಪ ಅಭಿಮತ

ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆ.21:

ರಾಜ್ಯದ ಶ್ರೀಮಂತ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಣ್ಣೇಶ್ವರ ಗ್ರಾಮ ಪಂಚಾಯಿತಿಗೆ ಹೆಚ್ಚಿನ ಆದಾಯ ಬರಲಿದ್ದು, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ಸೇರಿದಂತೆ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಗೆ ಪಂಚಾಯಿತಿ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಅಭಿಪ್ರಾಯ ಪಟ್ಟರು.

ಅಣ್ಣೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರ್ತಿಗಾನಹಳ್ಳಿ ಗ್ರಾಮದ ನೂತನ ಶಾಲಾ ಕಟ್ಟಡ ಉದ್ಘಾಟನೆ, ಭುವನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಕಾಮಗಾರಿ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಣ್ಣೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಮಾನ ನಿಲ್ದಾಣ ಇರುವುದರಿಂದ ಪಂಚಾಯಿತಿಗೆ ಒಳ್ಳೆಯ ಆದಾಯ ಬರುತ್ತದೆ. ಇಲ್ಲಿನ ಸಾಕಷ್ಟು ಸ್ಥಳೀಯ ನಿವಾಸಿಗಳು ಭೂಮಿ ಕಳೆದುಕೊಂಡವರು ಇದ್ದಾರೆ. ಅಂತವರನ್ನು ಮೇಲೆತ್ತುವ ಪ್ರಯತ್ನ ಮಾಡಬೇಕು. ಭೂಮಿ ಕಳೆದುಕೊಂಡವರಿಗೆ ವಸತಿ, ಉದ್ಯೋಗ ಕಲ್ಪಿಸುವುದು, ಸ್ವಯಂ ಉದ್ಯೋಗ, ವ್ಯವಹಾರ ಹೊಂದಲು ಉತ್ತೇಜಿಸುವ ಕಾರ್ಯ ಮಾಡಬೇಕು. ಪಂಚಾಯಿತಿಯು ಕೂಡ ಬಂದಂತಹ ಅನುದಾನದಲ್ಲಿ ಸಾಕಷ್ಟು ಒಳ್ಳೆಯ ಅಭಿವೃದ್ಧಿ ಕೆಲಸಗಳು ಮಾಡುತ್ತಿದ್ದಾರೆ ಎಂದರು.

ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾರೊಬ್ಬರೂ ಕೂಡ ಅವಲಂಬಿತ ಜೀವನ ನಡೆಸಬಾರದು, ಎಲ್ಲರೂ ಕೂಡ ಅಭಿವೃದ್ಧಿ ಕಾಣಬೇಕು ಎನ್ನುವುದು ನನ್ನ ಅಭಿಪ್ರಾಯ, ಬಡವರ, ಹಿಂದುಳಿದವರ ಅಭಿವೃದ್ಧಿ ಆಗಬೇಕು. ಬಂದಂತಹ ಅನುದಾನವನ್ನು ಜನಕ್ಕೆ ಯಾವುದು ಒಳ್ಳೆಯದು, ಯಾವುದು ಉಪಯೋಗ, ಶಾಶ್ವತ ಕೆಲಸಗಳು ಯಾವುವು ಎಂಬುದನ್ನು ಕುಲಂಕುಶವಾಗಿ ಪರಿಶೀಲಿಸಿ ಅಂತಹ ಕಾರ್ಯಕ್ರಮಗಳನ್ನು ಕೈಗೊಳ್ಳಿ ಎಂದು ಪಂಚಾಯಿತಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಕಾರ್ಯಕ್ರಮದಲ್ಲಿ ಬಯಪ ಅಧ್ಯಕ್ಷ ಶಾಂತಕುಮಾರ್,  ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ, ಆಡಳಿತಾಧಿಕಾರಿ ಸುನಿಲ್, ಪಿಡಿಒ ಗಂಗರಾಜು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

 

ಕಾಮಗಾರಿಗಳ, ಪಟ್ಟಿ

1. ಯರ್ತಿಗಾನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನೆ- ಅಂದಾಜು ಮೊತ್ತ 1 ಕೋಟಿ 30 ಲಕ್ಷ.
2. ಭೂವನಹಳ್ಳಿ ಗ್ರಾಮದ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ- ಅಂದಾಜು ಮೊತ್ತ 1 ಕೋಟಿ 5ಲಕ್ಷ.
3. ಪಂಚಾಯಿತಿಯ ಶೇ.25 ರ ಅನುದಾನದಲ್ಲಿ ಪ.ಜಾತಿ, ಪ.ಪಂಗಡದ ಕುಟುಂಬಗಳಿಗೆ ಮತ್ತು ಶೇ. 05 ಅನುದಾನದಲ್ಲಿ ವಿಶೇಷಚೇತನರು ಸೇರಿ ಒಟ್ಟು 1023 ಕುಟುಂಬಗಳಿಗೆ ವೈಯಕ್ತಿಕ ಯು.ಪಿ.ಎಸ್ ವಿತರಣೆ- ಅಂದಾಜು ಮೊತ್ತ 2 ಕೋಟಿ 98 ಲಕ್ಷ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ನಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ಹೊಸಕೋಟೆಯಲ್ಲಿ ಮತದಾರರ ಜಾಗೃತಿ ಮ್ಯಾರಾಥಾನ್ ಹಾಗೂ SIR ವಿಶೇಷ ಆಂದೋಲನಕ್ಕೆ ಜಿ. ಪಂ. ಸಿಇಒ ಡಾ.ವಾಸಂತಿ ಅಮರ್ ಚಾಲನೆ

ದೇವನಹಳ್ಳಿ ತಾಲ್ಲೂಕು ಆಡಳಿತ ಸೌಧದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ತಾವರೆಕೆರೆಯಲ್ಲಿ ಅದ್ಧೂರಿ ಗಣೇಶೋತ್ಸವ ಜೈ ಭೀಮ್ ವಿನಾಯಕ ಗೆಳೆಯರ ಬಳಗದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ : ರಸಮಂಜರಿ ಕಾರ್ಯಕ್ರಮಕ್ಕೆ ಮೆರುಗು

ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ: ಮತದಾರರ ನೋಂದಣಾಧಿಕಾರಿ (ERO) 

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ: ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ