--Ads--

ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಮಾಜ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ

On: June 1, 2023 11:06 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್.. ಜೂನ್ 01

ಬೆಂಗಳೂರು ಗ್ರಾಮಾಂತರ ಜಿಲ್ಲೆ  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ವಯಂ ಸೇವಾ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ಉಪಾಧೀಕ್ಷಕರ ಕಚೇರಿ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಸಹಾಯವಾಣಿ-1090 ಕೇಂದ್ರವನ್ನು ಪ್ರಾರಂಭಿಸಲು ಗೌರವಧನದ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು  ಸಮಾಜ ಸೇವಕರ ಒಂದು ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.

 ಸಮಾಜ ಸೇವಕರ(ಕೌನ್ಸಿಲರ್) ಒಂದು ಹುದ್ದೆಗೆ, ಎಂ.ಎಸ್.ಡಬ್ಲ್ಯೂ ವಿದ್ಯಾರ್ಹತೆ ಹೊಂದಿರುವ, 21 ರಿಂದ 40 ವರ್ಷ ವಯೋಮಿತಿಯುಳ್ಳ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಾಸಿಕ ಗೌರವಧನ ರೂ.10000/- ಗಳನ್ನು ನೀಡಲಾಗುವುದು.

ಅರ್ಜಿಗಳನ್ನು 2023ರ ಜೂನ್ 09 ರ ಸಂಜೆ 5:00 ಗಂಟೆಯೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ, ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಛೇರಿಗೆ ಸಲ್ಲಿಸಬಹುದು.
ಷರತ್ತುಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜಗದೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now