--Ads--

ಎನ್ ಡಿ ಎ ಜೊತೆ ಜೆಡಿಎಸ್ ಮುಂದುವರೆಯಲಿದೆ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು

On: March 3, 2026 12:02 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಎನ್ ಡಿ ಎ ಜೊತೆ ಜೆಡಿಎಸ್ ಮುಂದುವರೆಯಲಿದೆ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು

ಕುಕ್ಕೆ ಸುಬ್ರಹ್ಮಣ್ಯ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಮಿತ್ರ ಪಕ್ಷಗಳೊಂದಿಗೆ ಸೇರಿ ಜನಪರ ಆಡಳಿತ ನಡೆಸುತ್ತಿದೆ ಜೆಡಿಎಸ್ ಪಕ್ಷವು ಎನ್ ಡಿ ಎ ಜೊತೆಗೆ ಮುಂದಿನ ಚುನಾವಣೆಯನ್ನು ಎದುರಿಸಲಿದೆ ಎಂದು ಜೆಡಿಎಸ್ ರಾಷ್ಟ್ರಿಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎನ್.ಡಿಎ ಜೊತೆಗಿನ ನಮ್ಮ ಮೈತ್ರಿ ನಿರಾತಂಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕನಾಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.

ಜೆಡಿಎಸ್ ಸರ್ಕಾರ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಜನಪರ ಯೋಜನೆಗಳನ್ನು ಜಾರಿಗೆ ತಂದಿತ್ತು .ಇದೀಗ ಎನ್.ಡಿ.ಎ ಸರ್ಕಾರದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಸಚಿವರಾಗಿದ್ದಾರೆ ಎಂದರು.

ಇಂದಿನ ಯುವಜನರು ಐಟಿ, ಬಿಟಿ ಎಂದು ಉದ್ಯೋಗ ಅರಸುತ್ತ ದೂರದ ನಗರಗಳು, ಹೊರ ರಾಜ್ಯಗಳಿಗೆ ಹೋಗುವ ಬದಲು ತಮ್ಮ ಊರಿನಲ್ಲಿ ಕೃಷಿಯ ಬಗ್ಗೆ ಒಲವು ತೋರಿ, ಕೃಷಿಯನ್ನು ಅಭಿವೃದ್ಧಿಪಡಿಸಿ ಹೆಚ್ಚು ಆದಾಯ ಪಡೆಯುವಂತಾಗಬೇಕು. ಈ ಸಂಬಂಧ ಕೃಷಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಬೇಕು. ಯುವಕರು ರಾಜಕೀಯದಲ್ಲೂ ತೊಡಗಿಸಿಕೊಂಡು ಸಮಾಜಮುಖಿ ಕೆಲಸ ಮಾಡಲು ಅವಕಾಶಗಳು ಇವೆ ಎಂದರು.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸೋಮವಾರ ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಂಕಲ್ಪ ನೆರವೇರಿಸಿ, ಆಶ್ಲೇಷ ಸೇವೆ ನೆರವೇರಿಸಿದರು. ಬಳಿಕ ಅಕ್ಕಿ, ಬೆಲ್ಲ, ತೆಂಗಿನಕಾಯಿಯಲ್ಲಿ ತುಲಾಭಾರ ಸೇವೆ ನೆರವೇರಿಸಿದರು.

WhatsApp

Join Now

Telegram

Join Now

Instagram

Join Now