ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು
ವಿಜಯ ದರ್ಪಣ ನ್ಯೂಸ್……
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು

ಪುತ್ತೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೆಗೌಡ ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.
ಬೆಂಗಳೂರು ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿವಿಐಪಿ ಅತಿಥಿಗೃಹಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂದಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಸ್ವಾಗತಿಸಿ, ಬರಮಾಡಿಕೊಂಡರು. ಅತಿಥಿ ಗೃಹದಲ್ಲಿ ವಸತಿ ಪಡೆದು ರಾತ್ರಿ ಮಹಾಪೂಜೆಯಲ್ಲಿ ಪಾಲ್ಗೊಂಡರು.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸೋಮವಾರ ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಂಕಲ್ಪ ನೆರವೇರಿಸಿ, ಆಶ್ಲೇಷ ಸೇವೆ ನೆರವೇರಿಸಿದರು. ಬಳಿಕ ಅಕ್ಕಿ, ಬೆಲ್ಲ, ತೆಂಗಿನಕಾಯಿಯಲ್ಲಿ ತುಲಾಭಾರ ಸೇವೆ ನೆರವೇರಿಸಿದರು.


ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವಗೌಡ, ರಾಜ್ಯವಕ್ತಾರರಾದ ಎಂ.ಬಿ ಸದಾಶಿವ, ದಯಾಕರ್ ಆಳ್ವ, ಸಂತೋಷ್ ಜಾಕೆ, ಮಾಜಿ ಜಿಲ್ಲಾ ಪಂಚಾಯತ್ ಸಯ್ಯದ್ ಮೀರಾ ಸಾಹೇಬ್, ಕೇನ್ಯ ರವೀಂದ್ರನಾಥ ಶೆಟ್ಟಿ, ಶಶಿರಾಜ್ ಶೆಟ್ಟಿ ಮಂಗಳೂರು, ಉಮೇಶ್ ಕುಮಾರ್ ಗೌಡ ಬಂಟ್ವಾಳ,

ಚಂದ್ರಶೇಖರ ಗೌಡ ಕೋಡಿಂಬಾಳ, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್ ಹಾಗೂ ವೈದ್ಯಾಧಿಕಾರಿ ಡಾ. ಮಂಜುನಾಥ್, ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಹಾಗೂ ಸುಬ್ರಹ್ಮಣ್ಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ,ಆಂಜನಿಗೌಡ ಮುಂತಾದವರು ಹಾಜರಿದ್ದರು.
