--Ads--

ಎಲ್ಲಾ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಬಜೆಟ್ ನ ಉದ್ದೇಶ: ಸಿ ಎಂ ಸಿದ್ದರಾಮಯ್ಯ

On: March 7, 2026 6:04 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು

ಎಲ್ಲಾ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಬಜೆಟ್ ನ ಉದ್ದೇಶ: ಸಿ ಎಂ ಸಿದ್ದರಾಮಯ್ಯ

ತಾಂಡವಪುರ ಮಾರ್ಚ್ 7: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಜಿಲ್ಲೆ, ವರುಣಾ ವಿಧಾನಸಭಾ ಕ್ಷೇತ್ರದಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಸುದ್ದಿಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡುತ್ತಾ
ಪ್ರಧಾನಿ ಮೋದಿಯವರ ಅವಧಿಯಲ್ಲಿ ದೇಶದ ಸಾಲ 218 ಲಕ್ಷ ಕೋಟಿ, ಬಿಜೆಪಿಯವರು ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯ ಪ್ರಧಾನಿ ಮೋದಿಯವರು ಸಾಲ ಮಾಡಿದ್ದಾರೆ. ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ. ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ ಮಾನದಂಡಗಳ ಮಿತಿಯಲ್ಲಿ ಸಾಲದ ಪ್ರಮಾಣ ಇದೆ. ಈ ಕಾಯ್ದೆಯಂತೆ ಸಾಲವು ಶೇ. 25 ರಷ್ಟಿರಬೇಕಿದ್ದು, ನಮ್ಮ ಸಾಲದ ಪ್ರಮಾಣ 24.94 ಇದ್ದು, ಮಿತಿಯೊಳಗೇ ಇದೆ. ಕೇಂದ್ರದ ಸಾಲದ ಪ್ರಮಾಣ 218 ಲಕ್ಷ ಕೋಟಿ ವಿದೆ. ಮೋದಿಯವರು ಅಧಿಕಾರಕ್ಕೆ ಬಂದ ನಂತರ 165 ಲಕ್ಷ ಕೋಟಿ ಸಾಲವನ್ನು ಮಾಡಿದ್ದಾರೆ. ಇದು ಸದರಿ ಕಾಯ್ದೆಯ ಪ್ರಕಾರ 55.6 % ರಷ್ಟು ಇದೆ. ಭಾರತದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕರ್ನಾಟಕ ರಾಜ್ಯದ ವಿತ್ತೀಯ ಕೊರತೆ 2.95 ರಷ್ಟಿದ್ದು, ಕಾಯ್ದೆಯು ಸೂಚಿಸಿರುವ ಜಿಡಿಪಿಯ ಶೇ. 3 ರ ಮಿತಿಯೊಳಗೆ ಇದೆ. ಕರ್ನಾಟಕದ ಜಿಡಿಪಿ 33,05,500 ಕೋಟಿ ಇದೆ. ಬಿಜೆಪಿಯವರು , ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಸೂಚಿಸಿರುವ ಮಾನದಂಡದ ಮಿತಿಯೊಳಗೆ ಸಾಲ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿದೆ
ಬಿಜೆಪಿಯ ಅಶೋಕ್ ರವರು ಈ ಬಾರಿಯ ಬಜೆಟ್ ಒಂದು ವರ್ಗಕ್ಕೆ ಸೀಮಿತಗೊಳಿಸಿರುವ ಬಜೆಟ್ ಆಗಿದೆ ಎಂದು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಈ ಬಾರಿಯ ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿ ಮಾಡಲಾಗಿದ್ದು ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಲಾಗುತ್ತದೆ, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವ ಉದ್ದೇಶವನ್ನು ಹೊಂದಿದೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ 10 ಸಾವಿರ ಕೋಟಿ ನಷ್ಟ
ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾಗಿದ್ದ ಅನುದಾನವನ್ನು ನೀಡದಿರುವುದರಿಂದ ರಾಜ್ಯದ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಕೇಂದ್ರದ ಜಿಎಸ್ ಟಿ ದರಪರಿಷ್ಕರಣೆಯಿಂದ ರಾಜ್ಯಕ್ಕೆ 10 ಸಾವಿರ ಕೋಟಿ ನಷ್ಟವಾಗಿದೆ ಎಂದು ಅವರು ತಿಳಿಸಿದರು

ಅವಕಾಶ ದೊರೆತರೆ ಮುಂದೆಯೂ ಬಜೆಟ್ ಮಂಡಿಸುತ್ತೇನೆ
ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್ ಗಳನ್ನೂ ನಾನೇ ಮಂಡಿಸುತ್ತೇನೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ದಾಖಲೆ ಮುರಿಯುವುದು ಸಾಧನೆಯಲ್ಲ. ಆದರೆ ಜನರು ಆಶೀರ್ವದಿಸಿ, ಅವಕಾಶ ನೀಡಿದರೆ, ಖಂಡಿತ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ರಾಮಯ್ಯ ಡಾ. ತಿಮ್ಮಯ್ಯ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್ ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಡಾ. ಪುಷ್ಪ ಅಮರನಾಥ್ ಕಾಂಗ್ರೆಸ್ ಅಧ್ಯಕ್ಷ ಡಾ. ಬಿಜೆ ವಿಜಯಕುಮಾರ ಎಂ ಶಿವಣ್ಣ ಎಂಸಿ ಹುಂಡಿ ಶಿವಪ್ರಸಾದ್ ನಾಡನಹಳ್ಳಿ ರವಿ ಸೇರಿದಂತೆ ಮುಂತಾದವರು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ