ವಿಜಯ ದರ್ಪಣ ನ್ಯೂಸ್…..
ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಿದ ಗ್ರಾಮ ಪಂಚಾಯಿತಿ ಸದಸ್ಯ ಎನ್ ಚಂದ್ರು

ತಾಂಡವಪುರ ಮಾರ್ಚ್ 10 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇಂದು ಗ್ರಾಮ ದೇವತೆ ಮಾರಮ್ಮ ದೇವಸ್ಥಾನದ ಬಳಿ ಗ್ರಾಮ ಪಂಚಾಯತಿ ಸದಸ್ಯ ಎನ್ ಚಂದ್ರು ಹಾಗೂ ಮುಖಂಡರಾದ ನಟರಾಜು ಸತೀಶ್ ಸಿದ್ದರಾಜುರವರು ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು.
ಇದೇ ವೇಳೆ ಮಾತನಾಡಿದ ಎನ್ ಚಂದ್ರುರವರು ನಮ್ಮ ಗ್ರಾಮದ ಗ್ರಾಮ ದೇವತೆ ಮಾರಮ್ಮನ ಹಬ್ಬದ ಪ್ರಯುಕ್ತ ಕಳೆದ ಒಂದು ತಿಂಗಳಿಂದ ಪೌರಕಾರ್ಮಿಕರು ತಮ್ಮ ಕರ್ತವ್ಯವನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಬಂದಿದ್ದಾರೆ ಜೊತೆಗೆ ನಮ್ಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಲ್ಲೂ ಸಹ ಇದೇ ರೀತಿ ಸ್ವಚ್ಛತೆಯನ್ನು ಕಾಪಾಡಿಕೊಂಡು ಗ್ರಾಮಗಳಲ್ಲಿ ಯಾವುದೇ ಸಾಂಕ್ರಾಮಿಕ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಿದ ಗ್ರಾಮ ಪಂಚಾಯಿತಿ ಸದಸ್ಯ ಎನ್ ಚಂದ್ರು ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿರುವುದು ಜನರ ಆರೋಗ್ಯದ ದೃಷ್ಟಿಯಿಂದ ಉತ್ತಮ ಸೇವೆ ಸಲ್ಲಿಸಿರುವ ಪೌರಕಾರ್ಮಿಕರ ಸೇವೆಗೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರಿಂದ ನಮ್ಮ ಕೈಲಾದ ಮಟ್ಟಿಗೆ ಅವರನ್ನು ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿ ಮಾತಾಡಿದ ಪೌರಕಾರ್ಮಿಕ ಸಂಘದ ಅಧ್ಯಕ್ಷ ಮುರುಗೇಶ್ ರವರು ಪಂಚಾಯತಿಯಲ್ಲಿ ಕೆಲಸ ಮಾಡುತ್ತಿರುವ ನಮ್ಮನ್ನು ಪಂಚಾಯ್ತಿಯ ಸದಸ್ಯರು ಹಾಗೂ ಗ್ರಾಮಸ್ಥರು ಗೌರವದಿಂದ ಕಾಣುವ ಮೂಲಕ ನಮ್ಮನ್ನು ಸನ್ಮಾನಿಸಿ ಗೌರವಿಸುತ್ತಿರುವುದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚು ಮಾಡಿದೆ ಅದೇ ರೀತಿ ಗ್ರಾಮದ ಸ್ವಚ್ಛತೆಗೆ ಹೆಚ್ಚು ಶ್ರಮವಹಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಮ್ಮ, ಗ್ರಾಮ ಪಂಚಾಯತ್ ಸದಸ್ಯ ಎನ್ ಚಂದ್ರು ಮುಖಂಡರಾದ ನಟರಾಜು ಸತೀಶ್ ವಿದ್ಯಸಾಗರ್ ದಲಿತ ಮುಖಂಡ ಕೆಂಪಣ್ಣಸತೀಶ್ ರಾವ್ ಸಿದ್ದರಾಜು ಶಾಂತ ಅವರ ಕಾರ್ಮಿಕರ ಮುಖಂಡ ಮುರುಗೇಶ್ ಹಾಗೂ ಪೌರಕಾರ್ಮಿಕರು ಮುಂತಾದವರು ಹಾಜರಿದ್ದರು





