ವಿಜಯ ದರ್ಪಣ ನ್ಯೂಸ್…..
ಚಿಕ್ಕಯ್ಯನ ಛತ್ರ ಗ್ರಾಮದಲ್ಲಿ ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ಸು ನಿಲುಗಡೆಗೆ ವಿದ್ಯಾರ್ಥಿಗಳ ಪೋಷಕರ ಒತ್ತಾಯ

ತಾಂಡವಪುರ ಏಪ್ರಿಲ್ 4 ಮೈಸೂರು ನಂಜನಗೂಡು ಊಟಿ ರಸ್ತೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಚಿಕ್ಕಯ್ಯನ ಛತ್ರ ಗ್ರಾಮದ ಬಳಿ ಸಾರಿಗೆ ಬಸ್ಸುಗಳು ನಿಲ್ಲಿಸದೆ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಸಂಬಂಧಪಟ್ಟ ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ ಶಾರಿಗೆ ವಸ್ತುಗಳನ್ನು ನಿಲ್ಲಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಿ ಅನುಕೂಲ ಮಾಡಿಕೊಡಬೇಕೆಂದು ವಿದ್ಯಾರ್ಥಿಗಳ ಪೋಷಕರು ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಅವರು ಈ ಸಂಬಂಧ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೈಸೂರಿನಲ್ಲಿ ಹುಟ್ಟಿ ರಸ್ತೆಯಲ್ಲಿ ಬೆಳಿಗ್ಗೆ 7: ಗಂಟೆಯಿಂದ ಬಂಚಳ್ಳಿ ಹುಂಡಿ ಚಿಕ್ಕಯ್ಯನ ಛತ್ರ ಗ್ರಾಮಗಳ ಶಾಲಾ-ಕಲೇಜು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ತಮ್ಮ ತಮ್ಮ ಶಾಲಾ ಕಾಲೇಜುಗಳಿಗೆ ತೆರಳಲು ಸಾರಿಗೆ ಬಸ್ಸುಗಳಿಗಾಗಿ ಕಾದು ಕಾದು ಸರಿಯಾದ ಸಮಯಕ್ಕೆ ನಾವು ಶಾಲಾ ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರಲ್ಲಿ ತಿಳಿಸಿದ್ದು ಪೋಷಕರು ಈ ಸಂಬಂಧವಾಗಿ ಸುದ್ದಿಗಾರರೊಂದಿಗೆ ಮಾತಾಡುತ್ತಾ, ಸಾರಿಗೆ ಬಸ್ಸಿನ ಚಾಲಕರು ಚಿಕ್ಕಯ್ಯನ ಛತ್ರ ಗ್ರಾಮದ ಬಳಿ ಬಸ್ ನಿಲ್ಲಿಸದೆ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ ಈ ರಸ್ತೆಯಲ್ಲಿ ಬೆಳಿಗ್ಗೆಯಿಂದ ಸಂಜೆ ತನಕ ನೂರಾರು ವರ್ಷಗಳು ಸಂಚಾರ ಮಾಡಿದರು ಕೂಡ ಬೆಳಗ್ಗೆ ಮತ್ತು ಸಾಯಂಕಾಲ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಸಾರಿಗೆ ಬಸ್ಸು ಸಿಗುತ್ತಿಲ್ಲ ಎಂದು ವಿದ್ಯಾರ್ಥಿಗಳ ಪೋಷಕರು ಆರಂಭಿಸಿದ್ದು ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ, ಕೂಡಲೇ ಚಿಕ್ಕಯ್ಯನ ಛತ್ರ ಗ್ರಾಮದ ಬಳಿ ಬೆಳಗ್ಗೆ ಮತ್ತು ಸಾಯಂಕಾಲ ಬಸ್ಸು ನಿಲ್ಲಿಸಬೇಕು ಇಲ್ಲವಾದರೆ ಒಂದು ವಾರದೊಳಗೆ ವಿದ್ಯಾರ್ಥಿಗಳ ಪೋಷಕರು ಸಾರ್ವಜನಿಕರ ಜೊತೆಗೂಡಿ ಸಾರಿಗೆ ಬಸ್ ಸೇವೆಗಾಗಿ ಹೋರಾಟವನ್ನು ನಾವು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸಂಬಂಧ ಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡುವ ಮೂಲಕ ಎಚ್ಚರಿಕೆ ನೀಡಿದ್ದಾರೆ










