--Ads--

ಮೋದಿಯಂತಹ ಮಹಾ ನಾಯಕರನ್ನು ಸೃಷ್ಟಿಸುವ ಶಕ್ತಿ ಬಿಜೆಪಿಗೆ ಇದೆ : ಸೀಕಲ್‌ ಅನಂದಗೌಡ 

On: April 9, 2026 3:24 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮೋದಿಯಂತಹ ಮಹಾ ನಾಯಕರನ್ನು ಸೃಷ್ಟಿಸುವ ಶಕ್ತಿ ಬಿಜೆಪಿಗೆ ಇದೆ : ಸೀಕಲ್‌ ಅನಂದಗೌಡ 

ಶಿಡ್ಲಘಟ್ಟ : ಇಡೀ ವಿಶ್ವವೇ ಭಾರತದ ಕಡೆ ತಿರುಗಿ ನೋಡುವಂತೆ ಮಾಡಿದ ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ, ಪ್ರಧಾನಿ ನರೇಂದ್ರ ಮೋದಿಯಂತಹ ಮಹಾ ನಾಯಕರನ್ನು ಸೃಷ್ಟಿಸುವ ಶಕ್ತಿ ಭಾರತೀಯ ಜನತಾ ಪಕ್ಷಕ್ಕೆ ಇದೆ ಎಂದು ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್‌ ಅನಂದಗೌಡ ತಿಳಿಸಿದರು.
ನಗರದ ಬಿಜೆಪಿ ‘ಸೇವಾಸೌಧ’ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ದೇಶವನ್ನು ಭೌಗೋಳಿಕವಾಗಿ ಸಂರಕ್ಷಣೆ ಸೇರಿದಂತೆ ದೇಶದ ಜನರಲ್ಲಿ ಸಂಸ್ಕೃತಿ, ಸಂಸ್ಕಾರ ಬೆಳೆಸುವ ದೃಷ್ಟಿಯಿಂದ ಸ್ಥಾಪಿಸಿದ ಜನಸಂಘ ನಂತರದ ದಿನಗಳಲ್ಲಿ ಭಾರತೀಯ ಜನತಾ ಪಕ್ಷವಾಗಿ ದೇಶಾದ್ಯಂತ ವಿಸ್ತರಿಸಿದೆ ಎಂದರೆ ಅದಕ್ಕೆ ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯರ ಶ್ರಮವೇ ಕಾರಣ ಎಂದು ಹೇಳಿದರು.

1980 ಏಪ್ರಿಲ್ – 6 ರಂದು ಸ್ಥಾಪನೆಯಾದ ಭಾರತೀಯ ಜನತಾ ಪಕ್ಷ ಪ್ರಸ್ತುತ ಕೇಂದ್ರ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ,ಇದಕ್ಕೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮುಖಂಡರು ಕಾರಣರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ನಗರ ಮಂಡಲ ಅಧ್ಯಕ್ಷ ದೇವರಾಜ್, ಮಾಜಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ,ನರೇಶ್,ರೂಪಸಿರಮೇಶ್, ಶ್ರೀನಿವಾಸ್,ಪುರುಷೋತ್ತಮ್,ಚಾತುರ್ಯ, ಮಂಜುಳಾ ನಾರಾಯಣಸ್ವಾಮಿ ಮುಂತಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now