--Ads--

ಶ್ರೀ ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

On: April 14, 2026 3:24 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಶ್ರೀ ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ತಾಂಡವಪುರ ಏಪ್ರಿಲ್ :ಕೇಂದ್ರದ ಬಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಶುಕ್ರವಾರ ನಗರದ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಬೆಳಿಗ್ಗೆ 8:30 ಕ್ಕೆ ಆಗಮಿಸಿದ ಎಚ್ಡಿಕೆ ಮತ್ತು ದಂಪತಿಗಳು ಶ್ರೀ ಗಣಪತಿ, ಶ್ರೀಕಂಠೇಶ್ವರ ಸ್ವಾಮಿ, ಪಾರ್ವತಿ ದೇವಿ, ಚಂಡಿಕೇಶ್ವರ, ಸುಬ್ರಹ್ಮಣ್ಯ , ನವಗ್ರಹ ದೇವರ ದರ್ಶನ ಪಡೆದು ಪುನೀತರಾದರು. ಎಚ್ಡಿಕೆ ದೇವಸ್ಥಾನಕ್ಕೆ ಆಗಮಿಸುತ್ತಿದ್ದಂತೆ ದೇವಾಲಯದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಹಾಗೂ ಸಿಬ್ಬಂದಿಗಳು ಪೂರ್ಣ ಕುಂಭ ಸ್ವಾಗತ ಕೋರಿದರು.

ಬಳಿಕ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬಂದಿದ್ದು, ನಮ್ಮ ಮನೆ ದೇವರಾದ ಶ್ರೀ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆಯಲು ಆಗಮಿಸಿದ್ದೇನೆ ಎಂದರು.

ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ಧನ ಸಹಾಯ

ಶ್ರೀ ಶ್ರೀಕಂಠೇಶ್ವರ ಸ್ವಾಮಿ ದರ್ಶನ ಪಡೆದು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಪೂಜಾ ಮತ್ತು ರವಿ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಹುಲ್ಲಹಳ್ಳಿ ಗ್ರಾಮದ ಪೂಜಾ ಎಂಬ ಮಹಿಳೆ ಎರಡು ಕಾಲುಗಳನ್ನು ಕಳೆದುಕೊಂಡು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸುದ್ದಿ ತಿಳಿದು ಭೇಟಿ ನೀಡಿದರು.

ಕುಟುಂಬದ ಪರಿಸ್ಥಿತಿ ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ. ಪೂಜಾ ಎಂಬ ಮಹಿಳೆ ಹಾಸಿಗೆ ಹಿಡಿದಿದ್ದು, ಜೊತೆಗೆ ಪತಿ ರವಿಗೆ ಅಪಘಾತದಿಂದ ಕಾಲು ಕಳೆದುಕೊಂಡಿರುವುದು ದುಃಖ ತರುತ್ತದೆ. ವಿಷಯವನ್ನು ಪಕ್ಷದ ಕಾರ್ಯಕರ್ತ ಸಂಜಯ ಗೌಡ ತಿಳಿಸಿದ್ದರು.

ನನಗೆ ಯಾರೇ ಕಷ್ಟದಲ್ಲಿದ್ದರು ಸಹಾಯ ಮಾಡಬೇಕು ಎಂದು ಇಲ್ಲಿಗೆ ಆಗಮಿಸಿದ್ದೇನೆ. ಕುಟುಂಬದಲ್ಲಿ ದುಡಿಯುವವರೇ ಹಾಸಿಗೆ ಹಿಡಿದಿದ್ದು, ಇವರ ತಂದೆ ಕೂಲಿ ಮಾಡಿ ದಿನಕ್ಕೆ 450 ರೂ. ಸಂಪಾದನೆ ಮಾಡಿ ಎಲ್ಲರನ್ನು ಸಾಕಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಇವರಿಗೆ ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ಇರುವುದು ತಿಳಿದು ಬಂದಿದೆ. ಸರ್ಕಾರದ ಅಧಿಕಾರಿಗಳೊಂದಿಗೆ ಮಾತನಾಡಿದಾಗ, ಸದ್ಯಕ್ಕೆ ಸೈಟ್ ಗಳು ಹಾಗೂ ಮನೆ ಸಿಗುವುದು ಕಷ್ಟ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಸರ್ಕಾರ ಬದಲಾವಣೆಯಾದಾಗ ಈ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಮನೆ ಒದಗಿಸಿ ಕೊಡಬಹುದು. ಇರುವ ಮನೆಯನ್ನ ಪ್ರತಿ ತಿಂಗಳು ಬಾಡಿಗೆ ಕಟ್ಟುವುದು ಸಹ ಕಷ್ಟಕರ ಪರಿಸ್ಥಿತಿಯಲ್ಲಿ ಇದ್ದಾರೆ. ಇನ್ನು ಒಂದು ವಾರದಲ್ಲಿ ಯಾವುದಾದರೂ ಒಂದು ಮನೆಯನ್ನ ಭೋಗ್ಯಕ್ಕೆ ಅಥವಾ ಸ್ವಂತಕ್ಕೆ ಕೊಡಿಸಿಕೊಡಲು ಬರವಸೆ ನೀಡಿದರು.

ಸದ್ಯಕ್ಕೆ 50‌ ಸಾವಿರ ಸಹಾಯಧನ ನೀಡಿದ್ದು, ಪೂಜಾ ಮತ್ತು ರವಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುವುದು ಎಂದರು. ತಹಶೀಲ್ದಾರ್ ಸ್ಮಿತಾ ರಾಮು ಹಾಗೂ ಅಧಿಕಾರಿಗಳಿಗೆ ಈ ಬಗ್ಗೆ ಗಮನಹರಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಮಂಜೇಗೌಡ, ಶಾಸಕ ಹರೀಶ್ ಗೌಡ, ಮಾಜಿ ಶಾಸಕರಾದ ಬಿ. ಹರ್ಷವರ್ಧನ್, ಅಶ್ವಿನ್ ಕುಮಾರ್,
ಸಂಜಯಗೌಡ, ನಾರಾಯಣಸ್ವಾಮಿ, ವಿ ಆರ್ ಡಬ್ಲ್ಯೂ ರಫಿ ಅಹಮದ್, ಉಮೇಶ್ ಸಿದ್ದರಾಜು ಸೇರಿದಂತೆ ಇತರರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮೈಸೂರಿನ ಪೌರಕಾರ್ಮಿಕ ಬೇಡಿಕೆಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದೆ. ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್

ಪಕ್ಷ ಸಂಘಟನೆಗೆ ಸಹಕಾರ ನೀಡಿ: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ ಬಸವಣ್ಣ

ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಾ.ಬಿ ಜೆ ವಿಜಯ್ ಕುಮಾರ್ ರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆಂದು ಪಕ್ಷದ ವರಿಷ್ಠರಲ್ಲಿ ಮನವಿ 

GFF 2026ರಲ್ಲಿ ಹಣಕಾಸು ಒಳಗೊಳ್ಳುವಿಕೆಯನ್ನು ಉತ್ತೇಜಿಸಲು DFS ಕಾರ್ಯದರ್ಶಿಯವರು ನವೀನ ಉಪಕ್ರಮಗಳನ್ನು ಅನಾವರಣ

ಕಾಲೇಜಿನ ಅಭಿವೃದ್ಧಿ ಕಾರ್ಯಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಮಗ್ರ ಸಮಾಲೋಚನೆ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್ 

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕರ್ನಾಟಕ ವತಿಯಿಂದ  ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಆನಂದ್ ಸಿ. ತಿರುಮಲ  ಆಯ್ಕೆ