--Ads--

ಅಂಬೇಡ್ಕರ್ ಹೋರಾಟದ ಬದುಕು ಜೀವನದಲ್ಲಿ ಅಳವಡಿಸಿಕೊಳ್ಳಿ :ತನ್ವೀರ್ ಸೇಠ್

On: April 14, 2026 5:39 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಅಂಬೇಡ್ಕರ್ ಹೋರಾಟದ ಬದುಕು ಜೀವನದಲ್ಲಿ ಅಳವಡಿಸಿಕೊಳ್ಳಿ :ತನ್ವೀರ್ ಸೇಠ್

ತಾಂಡವಪುರ ಏಪ್ರಿಲ್ 14 ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಕಾಲಘಟ್ಟದ ಅಗತ್ಯವಾಗಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ ರಾಮ್ ಅವರ ಸಂಘಗಳ ಒಕ್ಕೂಟದ ವತಿಯಿಂದ ಕಲಾಮಂದಿರದದಲ್ಲಿ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ 135ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ” ಎಂಬ ಅಂಬೇಡ್ಕರ್ ಅವರ ನುಡಿಯಂತೆ, ಇಂದಿನ ಯುವ ಪೀಳಿಗೆಗೆ ಮಹಾನ್ ವ್ಯಕ್ತಿಗಳ ಇತಿಹಾಸ, ಹೋರಾಟ, ತ್ಯಾಗ, ಚಿಂತನೆಗಳ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೆ, ತಮ್ಮ ಅಗಾಧ ಪಾಂಡಿತ್ಯ ಮತ್ತು ವಿದ್ವತ್ತಿನಿಂದ ಸಂವಿಧಾನ ರಚನೆಯ ಜವಾಬ್ದಾರಿಯನ್ನು ಪಡೆದರು. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು, ಶಿಕ್ಷಣ ಮತ್ತು ಜ್ಞಾನದಿಂದ ಜೀವನ ಹಾಗೂ ಸಮಾಜ ಎರಡನ್ನು ಉತ್ತಮವಾಗಿ ರೂಪಿಸಬಹುದು ಎಂದರು.
ಶಾಸಕ ಕೆ.ಹರೀಶ್ ಗೌಡ ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಆಶಯಗಳು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಾವು ಇಂದಿಗೂ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. ಈ ನಿಟ್ಟಿನಲ್ಲಿ ಮಾಧ್ಯಮಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಮೈಸೂರಿನಲ್ಲಿ ಈ ಬಾರಿ ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅತ್ಯಂತ ವಿಶಿಷ್ಟವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ನಿರಂತರವಾಗಿ ಹೋರಾಡಿದ ಮಹಾನ್ ಚೇತನ.ಅವರ ಹೋರಾಟದ ಫಲವಾಗಿ ಇಂದು ಶೋಷಿತ ವರ್ಗಗಳಿಗೆ ಘನತೆಯ ಬದುಕು ಸಿಕ್ಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಅಮರನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ‌ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್‌ ಆಸಿಫ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1ನ ಎ.ಜನಾರ್ಧನ್, ಅಪಾರ ಪೊಲೀಸ್ ಆಯುಕ್ತ ನಾಗೇಶ್, ಗಣ್ಯರಾದ ಮಲೆಯೂರು ಸೋಮಣ್ಣ ಇತರರು ಉಪಸ್ಥಿತರಿದ್ದರು.

ಅದ್ದೂರಿ ಮೆರವಣಿಗೆ
ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ನಗರದ ಪುರಭವನದ ಅವರಣದಲ್ಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಶಾಸಕ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯು ಪುರಭವನದಿಂದ ಕಲಾಮಂದಿರದವರೆಗೆ ವಿವಿಧ ಕಲಾ ತಂಡದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರದ ಭವ್ಯ ಮೆರವಣಿಗೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ ಸೇರಿ ಇನ್ನಿತರರು ಉಪಸ್ಥಿತರಿದ್ದರು

WhatsApp

Join Now

Telegram

Join Now

Instagram

Join Now