--Ads--

ತುಟಿಭತ್ಯೆ ತಡೆ ಖಂಡಿಸಿ ಬಿಎಸ್‌ಎನ್‌ಎಲ್‌ ಪಿಂಚಣಿದಾರರ ಪ್ರತಿಭಟನೆ

On: April 17, 2026 3:04 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ತುಟಿಭತ್ಯೆ ತಡೆ ಖಂಡಿಸಿ ಬಿಎಸ್‌ಎನ್‌ಎಲ್‌ ಪಿಂಚಣಿದಾರರ ಪ್ರತಿಭಟನೆ

ತಾಂಡವಪುರ ಏಪ್ರಿಲ್ 16 ಮೈಸೂರಿನಲ್ಲಿ ಕೇಂದ್ರ ಸರ್ಕಾರ ಬಿಎಸ್‌ಎನ್‌ಎಲ್ ಪಿಂಚಣಿದಾರರಿಗೆ ಜ.೧ರಿಂದ ಕೊಡಬೇಕಿರುವ ತುಟ್ಟಿ ಭತ್ಯೆ ತಡೆ ಹಿಡಿದಿರುವುದನ್ನು ಖಂಡಿಸಿ ಬಿಎಸ್‌ಎನ್‌ಎಲ್ ಪಿಂಚಣಿದಾರ ಜಂಟಿ ವೇದಿಕೆವತಿಯಿಂದ ಜಯಲಕ್ಷ್ಮಿಪುರಂನಲ್ಲಿರುವ ಬಿಎಸ್‌ಎನ್‌ಎಲ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ತುಟ್ಟಿ ಭತ್ಯೆ ತಡೆ ಹಿಡಿದಿರುವ ಕ್ರಮ ನಿರಾಧಾರ, ಅರ್ಥಹೀನ ಮತ್ತು ಅಸಂಬದ್ಧ. ಡಿಒಟಿ ಸೇವೆಯಿಂದ ಬಿಎಸ್‌ಎನ್‌ಎಲ್‌ಗೆ ಅಭಿಯುಕ್ತಿಗೊಂಡ ನೌಕರರನ್ನು ನಿವೃತ್ತಿಯ ನಂತರ ಕೇಂದ್ರ ಸರ್ಕಾರದ ಪಿಂಚಣಿದಾರರೆಂದು ಪರಿಗಣಿಸುವುದಾಗಿ ಬಿಎಸ್‌ಎನ್‌ಎಲ್ ಸ್ಥಾಪನೆಯಾದ ವರ್ಷದ(೨೦೦೦) ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನವಾಗಿದೆ.

ಅವರ ಪಿಂಚಣಿ ಮತ್ತು ತುಟ್ಟಿ ಭತ್ಯೆಯನ್ನು ನೌಕರರು ಸೇವೆಯಲ್ಲಿದ್ದಾಗ ವಂತಿಗೆ ರೂಪದಲ್ಲಿ ಕೊಟ್ಟಿರುವ ಸಂಚಿತ ನಿಧಿ ಯಿಂದ ಕೊಡಲ್ಪಡುತ್ತದೆಯೇ ವಿನಃ, ಯಾವುದೇ ಕೇಂದ್ರ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಯಿಂದ ಪಿಂಚಣಿ ಕೊಡುವುದಿಲ್ಲ.

ಹೀಗಾಗಿ ಬಿಎಸ್‌ಎನ್‌ಎಲ್ ಸಂಸ್ಥೆಯ ಲಾಭ-ನಷ್ಟದ ಆಧಾರದ ಮೇಲೆ ಪಿಂಚಣಿದಾರರ ತುಟ್ಟಿ ಭತ್ಯೆ ತಡೆಹಿಡಿಯುವುದು ಅನೈತಿಕ ಮತ್ತು ಅಸಂಬದ್ಧ. ಈ ಕೂಡಲೇ ಬಿಎಸ್‌ಎನ್‌ಎಲ್ ಪಿಂಚಣಿದಾರರಿಗೆ ಜ.೧ರಿಂದ ಕೊಡಬೇಕಿರುವ ತುಟ್ಟಿ ಭತ್ಯೆ ನೀಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಎಸ್.ವಿಷಕಂಠಮೂರ್ತಿ, ರಾಜಶೇಖರ್, ಬಸವರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ,  ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಡಾ. ಯತೀಂದ್ರ ಸಿದ್ದರಾಮಯ್ಯ ಶಾಸಕ ಕೆ ವೆಂಕಟೇಶ್ ರವರಿಂದ ಭೂಮಿ ಪೂಜೆ

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 5 ತಾಲ್ಲೂಕುಗಳು ತೀವ್ರ ಬರಪೀಡಿತ ; ಸಮಸ್ಯೆಯಾಗದಂತೆ ಪರಿಸ್ಥಿತಿ ನಿಭಾಯಿಸಿ ಡಿಸಿಎಂ ಡಾ.ಜಿ. ಪರಮೇಶ್ವರ್ 

ಜಿಲ್ಲೆಯ ನಂಜನಗೂಡು ತಾಲೂಕುಗಳ ಬರಪೀಡಿತ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಾ .ಜಿ. ಪರಮೇಶ್ವರ್  ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲನೆ

ವರುಣ ವಿಧಾನಸಭಾ ಕ್ಷೇತ್ರ ನಂಜನಗೂಡು ವಿಧಾನಸಭಾ ಕ್ಷೇತ್ರದ  ಕಾರ್ಯಕರ್ತರಿಂದ ಶ್ರೀಕಂಠೇಶ್ವರ ಸ್ವಾಮೀಗೆ ಪೂಜಿ ಸಲ್ಲಿಸಿ ಸಿಹಿ ವಿತರಿಸಿ ಸಂಸದ ಸುನಿಲ್ ಬೋಸ್ ಹುಟ್ಟುಹಬ್ಬ ಆಚರಣೆ

ನಗರಲೆ ಹಾಲು ಉತ್ಪಾದಕರ ಸಂಘದ 2025 -26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯಸಭೆ