--Ads--

ಮೇ 1ಕ್ಕೆ ಅಂಬೇಡ್ಕರ್ ಭವನದಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ: ಎಡಿಸಿ

On: April 25, 2026 5:35 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮೇ 1ಕ್ಕೆ ಅಂಬೇಡ್ಕರ್ ಭವನದಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆ: ಎಡಿಸಿ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏ.24 :

ಭಗವಾನ್ ಬುದ್ಧ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಮೇ 01 ರಂದು ದೇವನಹಳ್ಳಿ ಟೌನ್ ನ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬುದ್ಧ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ

ಮೇ 01 ರಂದು ಬೆಳಿಗ್ಗೆ 10 ಗಂಟೆಗೆ ದೇವನಹಳ್ಳಿ ತಾಲ್ಲೂಕು ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಸ್ಥಳದಿಂದ ಅಂಬೇಡ್ಕರ್ ಭವನದವರೆಗೆ ಭಗವಾನ್ ಬುದ್ಧರ ಪಲ್ಲಕ್ಕಿ ಮೆರವಣಿಗೆ ಹೊರಡಲಿದೆ, ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬುದ್ಧರ ಸಂದೇಶ, ಉಪನ್ಯಾಸ, ಬುದ್ಧರ ಸಾಮಾಜಿಕ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನ ಇರಲಿದೆ.

ಕಾರ್ಯಕ್ರಮದ ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವೇದಿಕೆ ಸಿದ್ದತೆ, ಗಣ್ಯರಿಗೆ ಸನ್ಮಾನ, ಕುಡಿಯುವ ನೀರು ಮತ್ತು ಉಪಹಾರ ವ್ಯವಸ್ಥೆ ಸೇರಿದಂತೆ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಕುಮಾರ್, ಸಮಾಜದ ಮುಖಂಡರಾದ ಶ್ರೀನಿವಾಸ್, ಲೋಕೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

 

ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಏ.24:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಬಾಲಭವನ ಸೊಸೈಟಿ ವತಿಯಿಂದ ಜಿಲ್ಲಾ ಮಟ್ಟದ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.

2026-27ನೇ ಸಾಲಿನಲ್ಲಿ 05 ವರ್ಷದಿಂದ 16 ವರ್ಷದವರೆಗಿನ ಮಕ್ಕಳಿಗಾಗಿ 15 ದಿನಗಳ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರವನ್ನು ಉಚಿತವಾಗಿ ಏಪ್ರಿಲ್ 30 ರಿಂದ ಮೇ 14 ರವರೆಗೆ ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆ, ಕೊರಚರಪಾಳ್ಯ ದೇವನಹಳ್ಳಿ ಟೌನ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಬೇಸಿಗೆ ಶಿಬಿರದಲ್ಲಿ ಚಿತ್ರಕಲೆ, ಕರಕುಶಲೆ, ಕರಾಟೆ ಯೋಗ, ಸಂಗೀತ ಮತ್ತು ಸಮೂಹ ನೃತ್ಯ ಚಟುವಟಿಕೆಗಳನ್ನು ಬಹುಮುಖ ಪ್ರತಿಭೆಯುಳ್ಳ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು.

ಶಾಲಾ ಮಕ್ಕಳು, ಗ್ರಾಮೀಣ ಪ್ರದೇಶದ ಮಕ್ಕಳು, ಬಾಲಕರ ಮತ್ತು ಬಾಲಕಿಯರ ಬಾಲಮಂದಿರದ ಮಕ್ಕಳಿಗೆ, ವಿಶೇಷ ಚೇತನರ ಮಕ್ಕಳಿಗೆ ಹಾಗೂ ಹೆಚ್ ಐ ವಿ ಸೋಂಕು ಪೀಡಿತ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುವುದು.

ಆಸಕ್ತ ಮಕ್ಕಳು ಏಪ್ರಿಲ್ 29 ರ ಸಂಜೆ 5.00 ಗಂಟೆ ಒಳಗಾಗಿ ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ದೂರವಾಣಿ ಸಂಖ್ಯೆ- 7349488216 ಗೆ ಸಂಪರ್ಕಿಸಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದಾಗಿದೆ.

ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮ ಸಂಯೋಜಕರಾದ ಶ್ವೇತ.ಬಿ ರವರ ದೂರವಾಣಿ ಸಂ. 7349488216 ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಸೂಚನೆ ಎರಡಕ್ಕಿಂತ ಹೆಚ್ಚು ಚಟುವಟಿಕೆಗಳಲ್ಲಿ ಅನುಭವ ಹೊಂದಿ ಭೋದಿಸುವ ಪ್ರಾವೀಣ್ಯತೆ ಹೊಂದಿರುವ ಬಹುಮುಖ ಪ್ರತಿಭೆಯುಳ್ಳ ಸಂಪನ್ಮೂಲ ವ್ಯಕ್ತಿಗಳಿಂದ ಗೌರವಧನದ ಆಧಾರದ ಮೇಲೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಬೋಧಕರು ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp

Join Now

Telegram

Join Now

Instagram

Join Now