ವಿಜಯ ದರ್ಪಣ ನ್ಯೂಸ್….
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ 3 ಕೋಟಿ ರೂಪಾಯಿ ಅನುದಾನ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ ಅಭಿನಯಿಸಿದ ಮೈಸೂರು ಜಿಲ್ಲೆ ಪತ್ರಕರ್ತರ ಸಂಘ. ಮೇ 7 ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 3 ಕೋಟಿ ಅನುದಾನವನ್ನು ಬಿಡುಗಡೆ ಮಾಡಿರುವುದರಿಂದ ಮುಖ್ಯಮಂತ್ರಿಗಳನ್ನು ಜಿಲ್ಲಾಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಉಪಾಧ್ಯಕ್ಷ ರವಿಪಾಂಡವಪುರ ಅವರು ಗುರುವಾರ ಮೈಸೂರು ನಿವಾಸದಲ್ಲಿ ಭೇಟಿ ಮಾಡಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಸಮರ್ಪಿಸಿದರು.











