ವಿಜಯ ದರ್ಪಣ ನ್ಯೂಸ್….
ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದಿಂದ ಪ್ರತಿಭಟನೆ

ಬೆಂಗಳೂರು: ಫೀಡಂ ಪಾರ್ಕ್ ಅವರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಕಳೆದ 15ದಿನದಲ್ಲಿ ಸತತ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಮಾಧ್ಯಮ ವಿಭಾಗದಿಂದ ವಿನೂತನವಾಗಿ ಎತ್ತಿನ ಗಾಡಿಯಲ್ಲಿ ದ್ವಿಚಕ್ರ ವಾಹನ ಇಟ್ಟು ಏಳೆಯುವ ಮೂಲಕ ಪ್ರತಿಭಟನೆ ನಡೆಸಿದರು.
ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ದೀಪಕ್ ಗೌಡ, ಯುವ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಶ್ರೀಧರ್ ರಾವ್, ಉತ್ತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಗೌಡ, ಗಾಂಧಿನಗರ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ರವರು ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ದೀಪಕ್ ಗೌಡ ಮಾತನಾಡಿ ಕಳೆದ 15ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನಾಲ್ಕು ಬಾರಿ ಏರಿಕೆ ಮಾಡಿದ್ದಾರೆ ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೆಚ್ಚಳವಾಗಿದೆ.
ಬಡವರು, ಮಧ್ಯಮವರ್ಗದವರು ಜೀವನ ಸಾಗಿಸುವುದು ಸಂಕಷ್ಟವಾಗಿದೆ. ರಾಜ್ಯದಲ್ಲಿ ಬಿಜೆಪಿ ಲೋಕಸಭಾ ಸದಸ್ಯರುಗಳು ಮೌನವಾಗಿದ್ದಾರೆ.
ಕೊಡಲೇ ಬಿಜೆಪಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಬೇಕು. ಇಲ್ಲದೇ ಹೋದರೆ ಉಗ್ರ ಹೋರಾಟ ಮಾಡಲಾಗುವುದು.











