--Ads--

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ

On: May 27, 2026 2:06 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ

ಶಿಡ್ಲಘಟ್ಟ : ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿದರೆ ಮಾತ್ರ ಕುಟುಂಬಗಳು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರಮಪಟ್ಟಲ್ಲಿ ಜೀವನ ನೆಮ್ಮದಿಯಾಗಿರಲಿದೆ ಎಂದು ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮತ್ತು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ, ಎಸ್. ರೇಂಜರ್ಸ್ ಮತ್ತು ರೋವರ್ಸ್‌ ರೆಡ್ ಕ್ರಾಸ್ ಪರಂಪರೆ ಕೂಟ ಮತ್ತು ಇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಚಿಮುಲ್ ನಿರ್ದೇಶಕ ಹುಜಗೂರು ರಾಮಯ್ಯ ಮಾತನಾಡಿ, ವಿದ್ಯಾವಂತರಾಗಿ ಭವಿಷ್ಯದಲ್ಲಿ ಉತ್ತಮ ಸ್ಥಾನಮಾನ ಪಡೆದು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಆ ಮೂಲಕ ಸಮಾಜ ನಮ್ಮನ್ನು ಗುರುತಿಸುವಂತಾಗಬೇಕು ಎಂದು ಹೇಳಿದರು.

ಇದೇ ವೇಳೆ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು, ಹೆಚ್ಚು ಅಂಕ ಪಡೆದ ಪ್ರತಿಭಾವಂತ ಹಾಗೂ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮುರಳಿ ಆನಂದ್, ಎನ್‌ಎಸ್‌ಎಸ್. ಕಾರ್ಯಕ್ರಮಾಧಿಕಾರಿ ಡಾ.ಆದಿನಾರಾಯಣ್‌, ಸಾಂಸ್ಕೃತಿಕ ಸಂಚಾಲಕ ಡಾ.ಷಫೀಅಹಮದ್, ಉಪನ್ಯಾಸಕ ಡಾ.ಎಂ.ಸುನೀತಾ, ಡಾ.ಶಿವಶಂಕರಿ,
ಡಾ.ರವಿಕುಮಾರ್,ಡಾ.ಜ್ಯೋತಿ,ಡಾ.ಸುಗುಣ , ಡಾ.ವಿಜಯೇಂದ್ರಕುಮಾ‌ರ್ ಮುಂತಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now