--Ads--

ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ರಕ್ತದಾನ ಶಿಬಿರ

On: May 29, 2026 5:55 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ರಕ್ತದಾನ ಶಿಬಿರ

ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ಕತಾರ್ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರವನ್ನು 2026ರ ಮೇ 22, ಶುಕ್ರವಾರದಂದು ಯಶಸ್ವಿಯಾಗಿ ಆಯೋಜಿಸಿತು.

ಈ ಕಾರ್ಯಕ್ರಮಕ್ಕೆ ಭಾರತೀಯ ರಾಯಭಾರ ಕಚೇರಿ, ದೋಹಾದ ಪ್ರಥಮ ಕಾರ್ಯದರ್ಶಿ ಶ್ರೀ ಈಶ್ ಸಿಂಘಾಲ್ ಹಾಗೂ ಹಮದ್ ಮೆಡಿಕಲ್ ಕಾರ್ಪೊರೇಷನ್‌ನ ವೈದ್ಯಕೀಯ ವ್ಯವಸ್ಥಾಪಕಿ ಮತ್ತು ಡೋನರ್ ರಿಕ್ರೂಟ್‌ಮೆಂಟ್ ಮುಖ್ಯಸ್ಥೆ ಶ್ರೀಮತಿ ಸಾದಿಕಾ ಅಲ್ ಮಹ್ಮೂದಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮವು ಕರ್ನಾಟಕ ಸಂಘ ಕತಾರ್‌ನ ಪ್ರಧಾನ ಕಾರ್ಯದರ್ಶಿ ಶ್ರೀ ಸುಜಿತ್ ಕುಮಾರ್ ಅವರ ಸ್ವಾಗತ ಭಾಷಣದೊಂದಿಗೆ ಆರಂಭವಾಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಶ್ರೀ ಈಶ್ ಸಿಂಘಾಲ್ ಅವರು, ರಕ್ತದಾನವು ಜೀವ ಉಳಿಸುವ ಮಹತ್ತರ ಮಾನವೀಯ ಕಾರ್ಯವಾಗಿದ್ದು, ಸಮುದಾಯದ ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತದಾನದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವರು ಸಂಘದ ಸಾಮಾಜಿಕ ಸೇವೆ ಹಾಗೂ ಸಮುದಾಯ ಕಲ್ಯಾಣದ ಬದ್ಧತೆಯನ್ನು ಒತ್ತಿಹೇಳಿದರು.

ಶ್ರೀಮತಿ ಸಾದಿಕಾ ಅಲ್ ಮಹ್ಮೂದಿ ಅವರು ಕತಾರ್ ಆಸ್ಪತ್ರೆಗಳಲ್ಲಿ ರಕ್ತ ಸಂಗ್ರಹದ ಅಗತ್ಯತೆ ಕುರಿತು ಮಾತನಾಡಿ, ಭಾರತೀಯ ಸಮುದಾಯದ ನಿರಂತರ ಬೆಂಬಲವನ್ನು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ತಜ್ಞ ಡಾ. ಅಮಿತ್ ವರ್ಮಾ ಅವರು ರಕ್ತದಾನದ ಆರೋಗ್ಯಕರ ಪ್ರಯೋಜನಗಳು ಹಾಗೂ ಅದರ ಮಹತ್ವದ ಬಗ್ಗೆ ವಿವರವಾಗಿ ಮಾತನಾಡಿ, ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 25 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಹಿರಿಯ ದಾನಿಗಳಾದ ಡಾ. ಸಂಜಯ್ ಕುದರಿ, ಶ್ರೀ ಶ್ರೀಧರ್ ನಾಯಕ್ ಹಾಗೂ ಶ್ರೀ ಮೊಹಮ್ಮದ್ ಸೊಹೈಲ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಶಿಬಿರಕ್ಕೆ ಭಾರತೀಯ ಅನಿವಾಸಿ ಸಮುದಾಯದಿಂದ ಭಾರೀ ಸ್ಪಂದನೆ ದೊರೆತಿದ್ದು, ಸಂಗ್ರಹಿಸಲಾದ ರಕ್ತ ಘಟಕಗಳು ಹಮದ್ ಮೆಡಿಕಲ್ ಕಾರ್ಪೊರೇಷನ್‌ನ ಜೀವ ರಕ್ಷಕ ಸೇವೆಗಳಿಗೆ ನೆರವಾಗಲಿವೆ.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದವರ ಸಂಗೀತ ಕಾರ್ಯಕ್ರಮ ಸಂಭ್ರಮ 2026 ರ ಪೋಸ್ಟರ್ ಅನ್ನು ಅಧಿಕೃತವಾಗಿ ಅನಾವರಣಗೊಳಿಸಲಾಯಿತು. ಈ ಕಾರ್ಯಕ್ರಮವು ಜೂನ್ 12, 2026 ರಂದು ದೋಹಾದ DPS MIS ಆಡಿಟೋರಿಯಂನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಶ್ರೀಮತಿ ಶುಭಾ ಅವರು ನಿರೂಪಿಸಿದರೆ, ಉಪಾಧ್ಯಕ್ಷ ಶ್ರೀ ಅನಿಲ್ ಭಾಸಗಿ ಅವರು ವಂದನಾರ್ಪಣೆ ಸಲ್ಲಿಸಿದರು.

ಈ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದ ಎಲ್ಲಾ ಸ್ವಯಂಸೇವಕರು, ಬೆಂಬಲಿಗರು, ಮಾಧ್ಯಮ ಸಹಯೋಗಿಗಳು ಹಾಗೂ ರಕ್ತದಾನಿಗಳಿಗೆ ಕರ್ನಾಟಕ ಸಂಘ ಕತಾರ್ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.

WhatsApp

Join Now

Telegram

Join Now

Instagram

Join Now