--Ads--

ನಾಡು ಕಂಡ ಶ್ರೇಷ್ಠ ಅರಸ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರವಾಸಿಗರಿಗೆ ಮೈಸೂರ್ ಪಾಕ್ ವಿತರಣೆ

On: June 3, 2026 4:48 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ನಾಡು ಕಂಡ ಶ್ರೇಷ್ಠ ಅರಸ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರವಾಸಿಗರಿಗೆ ಮೈಸೂರ್ ಪಾಕ್ ವಿತರಣೆ

ತಾಂಡವಪುರ ಜೂನ್ 3 ಮೈಸೂರಿನ ಅರಮನೆ ವರಹಾ ಗೇಟ್, ದಕ್ಷಿಣ ದ್ವಾರದ ಮುಂಭಾಗದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಲ್ವಡಿ ಅವರ ಸಾಧನೆಗಳನ್ನು ಸ್ಮರಿಸಿಕೊಂಡು ಪ್ರವಾಸಿಯರಿಗೆ ಮೈಸೂರ್ ಪಾಕ್ ವಿತರಿಸಲಾಯಿತು

ಈ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿ, ಮಹಿಳೆಯರ ಸಬಲೀಕರಣ, ವಿದ್ಯಾಭ್ಯಾಸ, ಶಿಕ್ಷಣ, ಕೃಷಿ, ಕೈಗಾರಿಕಾ ಕ್ಷೇತ್ರಕ್ಕೆ ಅಪಾರ ಉತ್ತೇಜನ ನೀಡಿದ ನಾಲ್ವಡಿ ಅವರು, ರಾಜ್ಯದಲ್ಲಿ ಮತ್ಯಾರು ಮಾಡದಂತಂಹ ಸಾಧನೆ ಮಾಡಿದ್ದಾರೆ. ಅವರು ನೀಡಿದ ಕೊಡುಗೆಗಳಿಗೆ ಅವರ ಹೆಸರುಗಳನ್ನು ಇಟ್ಟುಕೊಂಡಿಲ್ಲ. ಯೋಗ್ಯತೆ ಇದ್ದರೆ ಯೋಗ ತಾನಾಗಿಯೇ ಬರಲಿದೆ ಎಂದು ಬದುಕಿದವರು. ಕನ್ನಡನಾಡು ಮಾತ್ರವಲ್ಲದೆ ದೇಶದಲ್ಲಿ ನಾಲ್ವಡಿ ಅವರ ಹೆಸರು ಅಜರಾಮರ ಎಂದರು.

ಎಪಿಎನ್ ಪ್ರಾಪರ್ಟೀಸ್ ಮುಖ್ಯಸ್ಥ ಎ.ಪಿ.ನಾಗೇಶ್, ಹಿರಿಯ ಸಮಾಜ ಸೇವಕ ಡಾ.ರಘುರಾಂ ಕೆ.ವಾಜಪೇಯಿ, ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಸಮಾಜ ಸೇವಕ ದೊರೆಸ್ವಾಮಿ, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ.ಲಿಂಗರಾಜು, ಜೆಡಿಎಸ್ ನಗರಾಧ್ಯಕ್ಷ ಎಸ್‌ಬಿಎಂ ಮಂಜು, ಲಯನ್ಸ್ ಕ್ಲಬ್ ಆಫ್ ಗೋಲ್ಡನ್ ಸಿಟಿ ಅಧ್ಯಕ್ಷ ಗೋಲ್ಡನ್ ಸುರೇಶ್, ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಸೇರಿದಂತೆ ಹಲವರು ಇದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ನಿರುದ್ಯೋಗಿ ಯುವಕರು ಯುವತಿಯರು  ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಿ: ಸಚಿವ ಡಾ. ಯತೀಂದ್ರ ಸಿದ್ರಾಮಯ್ಯ ಕರೆ

ಅಹವಾಲು ನಿಮ್ಮದು, ಪರಿಹಾರ ನಮ್ಮದು. ಮೈಸೂರಿನ ಪ್ರಜಾ ಸೇವ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ನನ್ನ ಅವಧಿಯಲ್ಲಿ ದೇವಾಲಯದಲ್ಲಿ ಅವ್ಯವಹಾರ ನಡೆದಿಲ್ಲ ಅವ್ಯವಾರ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಮಾಜಿ ಶಾಸಕ ಬಿ ಹರ್ಷವರ್ಧನ್

ಬರ ಪರಿಶೀಲನೆ ಅನ್ನದಾತರಿಂದ ಮಾಹಿತಿ ಪಡೆದ ಡಿಸಿಎಂ ಡಾ ಜಿ ಪರಮೇಶ್ವರ್

ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ  20 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್