--Ads--

ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಅಭಿವೃದ್ಧಿಗೆ  ಧನಸಹಾಯ  ಮಾಡಿದ  ಶ್ರೀ ನಿಸರ್ಗ ನಾರಾಯಣಸ್ವಾಮಿ 

On: June 9, 2026 6:40 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಅಭಿವೃದ್ಧಿಗೆ  ಧನಸಹಾಯ  ಮಾಡಿದ  ಶ್ರೀ ನಿಸರ್ಗ ನಾರಾಯಣಸ್ವಾಮಿ 

ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಚೌಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಗಂಗಾದೇವಿ ದೇವಾಲಯದ ಆವರಣಕ್ಕೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಿಸರ್ಗ ನಾರಾಯಣಸ್ವಾಮಿ ಅವರು ಇಂದು ಭೇಟಿ ನೀಡಿ, ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.

​ಗ್ರಾಮದ ‘ಶ್ರೀ ಗಂಗಾದೇವಿ ದೇವಾಲಯ ಸೇವಾ ಟ್ರಸ್ಟ್ (ರಿ.)’ ಹಾಗೂ ಸಮಸ್ತ ಗ್ರಾಮಸ್ಥರ ಸಹಯೋಗದೊಂದಿಗೆ ನೂತನವಾಗಿ ನಿರ್ಮಿಸುತ್ತಿರುವ ಶ್ರೀ ಗಂಗಾದೇವಿ, ಶ್ರೀ ಕೈವಾರ ಯೋಗಿನಾರೇಯಣರ ಶಿಲಾ ವಿಗ್ರಹಗಳು, ರಾಜಗೋಪುರ ಹಾಗೂ ಧ್ವಜಸ್ತಂಭ ಪ್ರತಿಷ್ಠಾಪನಾ ಕಾರ್ಯಕ್ರಮಗಳು ಮುಂದಿನ ತಿಂಗಳು (ಜುಲೈ 1 ರಿಂದ ಜುಲೈ 3 ರವರೆಗೆ) ನಡೆಯಲಿವೆ. ಈ ಹಿನ್ನೆಲೆಯಲ್ಲಿ ದೇವಾಲಯದ ಸಿದ್ಧತೆಗಳನ್ನು ಮಾಜಿ ಶಾಸಕರು ಪರಿಶೀಲಿಸಿದರು.

​ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು, ದೇವಾಲಯದ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ ಎಂದು ಆಶಿಸಿದರು. ಭಗವಂತನ ಈ ಪವಿತ್ರ ಕಾರ್ಯಕ್ಕೆ ಕೈಜೋಡಿಸಿದ ಅವರು, ದೇವಾಲಯದ ಅಭಿವೃದ್ಧಿ ನಿಧಿಗೆ ವೈಯಕ್ತಿಕವಾಗಿ ಧನಸಹಾಯವನ್ನು ಚೆಕ್ ಮೂಲಕ ಹಸ್ತಾಂತರಿಸಿದರು.

​”ಗ್ರಾಮಸ್ಥರು ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಒಗ್ಗಟ್ಟಿನಿಂದ ಕೈಗೊಂಡಿರುವ ಈ ಕಾರ್ಯ ನಿಜಕ್ಕೂ ಶ್ಲಾಘನೀಯ. ಆ ದೇವರ ಆಶೀರ್ವಾದ ಸದಾ ಎಲ್ಲರ ಮೇಲಿರಲಿ.”
ಎಂದು ನಿಸರ್ಗ ನಾರಾಯಣಸ್ವಾಮಿ ಹೇಳಿದರು

​ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಎಸ್. ಮಹೇಶ್, ಗೌರವಾಧ್ಯಕ್ಷ ಚೌಡಪ್ಪನಹಳ್ಳಿ ಸಂಪಂಗಪ್ಪನವರು, ಕಾರ್ಯಾಧ್ಯಕ್ಷ ಜಿ.ಎ. ರವೀಂದ್ರ, ಪ್ರಧಾನ ಕಾರ್ಯದರ್ಶಿ ಮನೋಹರ್, ಕಾರ್ಯದರ್ಶಿ ರಾಮಾಂಜನೇಯ ದಾಸ್, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ರಾಜಣ್ಣ ಉಪಸ್ಥಿತರಿದ್ದರು.
​ಹಾಗೂ ಪ್ರಮುಖ ಮುಖಂಡರುಗಳಾದ ರಾಜಣ್ಣ, ಅಶ್ವತ್, ಶಂಕರ್, ಮುನಿರಾಜು, ವೆಂಕಟಶಾಮಪ್ಪ, ಮುನಿವೆಂಕಟಸ್ವಾಮಿ ಸೇರಿದಂತೆ ಅನೇಕ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now