--Ads--

ಜೂನ್ – 27 ರಂದು ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಅರ್ಥಪೂರ್ಣ ಆಚರಣೆ : ತಹಶಿಲ್ದಾರ್ ಗಗನಸಿಂಧು

On: June 16, 2026 5:23 PM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್….

ಜೂನ್  27 ರಂದು ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಅರ್ಥಪೂರ್ಣ ಆಚರಣೆ : ತಹಶಿಲ್ದಾರ್ ಗಗನಸಿಂಧು

ಶಿಡ್ಲಘಟ್ಟ : ಕೆಂಪೇಗೌಡರ ಕೊಡುಗೆಗಳು ಜಗತ್ತಿಗೆ ಮಾದರಿಯಾಗಿವೆ ಅವರ ಜಯಂತಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ತಾಲ್ಲೂಕಿನ ಎಲ್ಲಾ ಸಮುದಾಯಗಳ, ಸಂಘಟನೆಗಳ ಮುಖಂಡರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸೋಣ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗುವುದು ಎಂದು ತಹಶಿಲ್ದಾರ್ ಗಗನಸಿಂಧು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ ಎಲ್ಲಾ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ ಮಹಾನಿಯರು ಜೂನ್ – 27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದರು.
ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಪಕ್ಷಾತೀತ ಹಾಗೂ ಸರ್ವ ಸಮುದಾಯಗಳ ಸಹಭಾಗಿತ್ವದಲ್ಲಿ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ,ಅಂದು ಬೆಳಿಗ್ಗೆ 9:30ಕ್ಕೆ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ,10ಕ್ಕೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ವೇದಿಕೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 11 ಗಂಟೆಗೆ ಸಾಂಸ್ಕೃತಿಕ ಕಲಾತಂಡಗಳು ಮತ್ತು ಸ್ತಬ್ಧಚಿತ್ರಗಳನ್ನೊಳಗೊಂಡ ಭವ್ಯ ಮೆರವಣಿಗೆಗೆ ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿಯ ಸಲ್ಲಾಪುರಮ್ಮ ದೇವಾಲಯದ ಬಳಿ ಚಾಲನೆ ನೀಡಲಾಗುವುದು.
ನಗರಸಭೆಯಿಂದ ರಸ್ತೆಗಳ ಸ್ವಚ್ಛತೆ ಹಾಗೂ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗುವುದು ,ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಭಾಗವಹಿಸುವಂತೆ ತಹಶಿಲ್ದಾರ್ ಸೂಚಿಸಿದರು.
ಪೂರ್ವಬಾವಿ ಸಭೆಯಲ್ಲಿ ಒಕ್ಕಲಿಗ ಸಂಘದ ನಗರ ಅಧ್ಯಕ್ಷ ಬಿ.ನಾರಾಯಣಸ್ವಾಮಿ , ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ,ತಾಲ್ಲೂಕು ಒಕ್ಕಲಿಗರ ಯುವಸೇನೆ ಸಂಘದ ಅಧ್ಯಕ್ಷ ಜೆ.ಎಸ್‌.ವೆಂಕಟಸ್ವಾಮಿ, ತಾಲ್ಲೂಕು ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಪಿ.ಎಸ್.ಐ.ವೇಣುಗೋಪಾಲ್ ಹಾಗು ಸಮುದಾಯ ಮುಖಂಡರು ಭಾಗವಹಿಸಿದ್ದರು.

ದಾಸವಾಣಿ ಕಾರ್ಯಕ್ರಮ
————————–


ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜೂನ್ 18, ಗುರುವಾರ ಸಂಜೆ 5-15ಕ್ಕೆ “ದಾಸವಾಣಿ ಕಾರ್ಯಕ್ರಮ”. ಗಾಯನ ; ಅನಘಾ ರಾಜಪುರೋಹಿತ್, ಕೀರ್ತನಾ ಶ್ರೀಕಾಂತ್, ಶಾಲಿನಿ ಮತ್ತು ಮನಸ್ವಿನಿ ರಾಜ್, ವೀಣೆ : ಕಾರ್ತೀಕ್ ಶ್ರೀಕಾಂತ್, ಮೃದಂಗ : ವರದೇಂದ್ರ ಸಿಂಹ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 5ನೇ ಬಡಾವಣೆ, ಜಯನಗರ, ಬೆಂಗಳೂರು-41

WhatsApp

Join Now

Telegram

Join Now

Instagram

Join Now