--Ads--

ಪಬ್ ನಲ್ಲಿ ನಡೆದ ಅಗ್ನಿ ಅವಘಡ: ಅಬಕಾರಿ ಡಿಸಿ ಅಮಾನತ್ತಿಗೆ ಶಿಫಾರಸ್ಸು: ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ

On: June 16, 2026 5:41 PM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್…

ಪಬ್ ನಲ್ಲಿ ನಡೆದ ಅಗ್ನಿ ಅವಘಡ: ಅಬಕಾರಿ ಡಿಸಿ ಅಮಾನತ್ತಿಗೆ ಶಿಫಾರಸ್ಸು: ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ

ತಾಂಡವಪುರ,ಜೂ.16: ನಿನ್ನೆ ಮೈಸೂರಿನ ದಟ್ಟಗಳ್ಳಿಯ ರಿಂಗ್ ರಸ್ತೆ ಬಳ ಇರುವ ಫಾಕ್ಸ್ ಡೆನ್ ಪಬ್ ನಲ್ಲಿ ನಿನ್ನೆ ನಡೆದ ಬೆಂಕಿ ಅವಘಡದಲ್ಲಿ ಇಬ್ಬರು ಸಾವಿಗೀಡಾದ ಹಿನ್ನೆಲೆಯಲ್ಲಿ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತ್ತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ ತಿಳಿಸಿದರು.
ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮಂಗಳವಾರ ಭೇಟಿ ನೀಡಿ, ನಿನ್ನೆ ಬೆಂಕಿ ಅವಘಡದಲ್ಲಿ ಸಾವಿಗೀಡಾದ ಇಬ್ಬರ ಅಂತಿಮ ದರ್ಶನ‌ಪಡೆದು ಮೃತ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಡಾ ಯತೀಂದ್ರ ಸಿದ್ದರಾಮಯ್ಯ ಮೈಸೂರು ಜಿಲ್ಲೆಯಲ್ಲಿ ಅಲ್ಲದೆ ಮೈಸೂರು ನಗರದಲ್ಲಿ ಯಾವುದೇ ಲೈಸೆನ್ಸ್ ಇಲ್ಲದೆ ಈ ಪಬ್ ನಡೆಸಲಾಗುತ್ತಿತ್ತು, ಹಾಗಾಗಿ ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲಾಗಿದೆ.ಪಬ್ ಮಾಲೀಕನ ವಿರುದ್ಧ ದೂರು ದಾಖಲು ಮಾಡಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಮೈಸೂರಿನಲ್ಲಿ ಅನೇಕ ಪಬ್ ಬಾರ್ ಅಂಡ್ ರೆಸ್ಟೋರೆಂಟ್ ಗಳು ಲೈಸನ್ಸ್ ಪಡೆಯದೆ ನಡೆಸುತ್ತಿರುವ ವಿಚಾರ ಗೊತ್ತಾಗಿದೆ. ಎಲ್ಲೆಲ್ಲಿ ಅಕ್ರಮ ಹಾಗೂ ಲೈಸನ್ಸ್ ಇಲ್ಲದೆ ಬಾರ್ ರೆಸ್ಟೋರೆಂಟ್ ನಡೆಯುತ್ತಿದೆ ಅಂತವುಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಅಬಕಾರಿ ಡಿಸಿ ಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.
ಲೈಸನ್ಸ್ ಇಲ್ಲದೆ ಬಾರ್ ನಡೆಸುತ್ತಿದ್ದರೂ ಅಬಕಾರಿ ಡಿಸಿ ಕಣ್ಮುಚ್ಚಿ ಕುಳಿತಿದ್ದಾರೆ. ಅಧಿಕಾರಿಗಳ ಮೇಲೂ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ, ಅಮಾನತು ಮಾಡುವಂತೆ ಶಿಫಾರಸ್ಸು ಮಾಡುತ್ತೇನೆ. ಎಲ್ಲ ಕಡೆ ಪರಿಶೀಲನೆ ನಡೆಸುವಂತೆ ಪೊಲೀಸರಿಗೂ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು
ಮೈಸೂರಿನ ಎಲ್ಲ ಕಮರ್ಷಿಯಲ್ ಕಟ್ಟಡಗಳಲ್ಲಿ ಫೈರ್ ಬಗ್ಗೆ ಮುಂಜಾಗ್ರತೆ ಕ್ರಮ ತೆಗೆದುಕೊಂಡಿರುವ ಕುರಿತು ಪರಿಶೀಲನೆ ನಡೆಸಲು ಹೇಳಿದ್ದೇನೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಲು ಹೇಳಿದ್ದೇನೆ ಎಂದು ತಿಳಿಸಿದರು.
ಮೃತರ ಕುಟುಂಬಕ್ಕೆ ಪರಿಹಾರದ ಬಗ್ಗೆ ಸಿಎಂ ಗಮನಕ್ಕೆ: ಮೃತ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಗಮನಕ್ಕೆ ತರಲಾಗುವುದು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ಮೃತ ಪಟ್ಟ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಎಂಎಲ್ ಸಿ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ, ನಾವು 5 ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ‌, ಇಂದು ನಡೆಯುವ ಸಿಎಲ್‌ಪಿ ಸಭೆಯಲ್ಲಿ ನಾನು ಕೂಡ ಭಾಗಿಯಾಗುತ್ತೇನೆ. ಚುನಾವಣೆ ಸಂಧರ್ಭದಲ್ಲಿ ಇದು ಸಾಮಾನ್ಯ ಪ್ರಕ್ರಿಯೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.
ಬಿಡದಿ ಟೌನ್ ಶಿಪ್ ವಿಚಾರದ ಬಗ್ಗೆ ಮಾತನಾಡಿದ ಅವರು, ಟೌನ್ ಶಿಫ್ ಮಾಡುವುದು ಅತ್ಯವಶ್ಯಕ, 80% ರೈತರು ಜಮೀನು ಕೊಡಲು ಒಪ್ಪಿದ್ದಾರೆ . ಹೆಚ್ಚಿನ ಮಟ್ಟದ ಪರಿಹಾರಕ್ಕೆ ಒಪ್ಪಿದ್ದಾರೆ, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ. ಬಿಡದಿ ಟೌನ್ ಶಿಪ್ ಗೆ ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರು ಜನಸಂದಣಿ ಹೆಚ್ಚಾಗಿದೆ. ಎಷ್ಟೋ ಜನರಿಗೆ ನಿವೇಶನದ ಅಗತ್ಯ ಇದೆ. ಬೆಂಗಳೂರು ಜನಸಂಖ್ಯೆ ವಿಸ್ತರಣೆ ಆಗಬೇಕಿದೆ. ಬೆಂಗಳೂರು ವಿಸ್ತರಣೆಯ ಅವಶ್ಯಕತೆಯಂತೂ ಇದೆ. ರೈತರೊಂದಿಗೆ ಮಾತುಕತೆ ನಡೆಸಿ, ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಮಾಡುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ ಹರೀಶ್ ಗೌಡ ದರ್ಶನ್ ಧ್ರುವನಾರಾಯಣ್ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿಜೆ ವಿಜಯಕುಮಾರ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಹಾಗೂ ಅಧಿಕಾರಿಗಳು ಹಾಜರಿದ್ದರು

WhatsApp

Join Now

Telegram

Join Now

Instagram

Join Now