ವಿಜಯ ದರ್ಪಣ ನ್ಯೂಸ್…
ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಸಿಇಓ ಭೇಟಿ,ಪರಿಶೀಲನೆ

ಬೆಂ.ಗ್ರಾ ಜಿಲ್ಲೆ ಜೂ. 16(ಕರ್ನಾಟಕ ವಾರ್ತೆ):-
ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಾಸಂತಿ ಅಮರ್ ಬಿ ವಿ ಅವರು ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಆಡಳಿತಾತ್ಮಕ ಕಾರ್ಯಗಳ ಪರಿಶೀಲನೆ ನಡೆಸಿದರು.
ಹಾಡೋನಹಳ್ಳಿ ಗ್ರಾಮದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗುಲಾಬಿ ತೋಟಕ್ಕೆ ಭೇಟಿ ನೀಡಿ ರೈತ ಸಮಲೋಚಿಸಿದರು. ನರೇಗಾ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದ ಅವರು, ಯೋಜನೆಯ ಮಾರ್ಗಸೂಚಿಗಳು ಹಾಗೂ ಚೆಕ್‌ಲಿಸ್ಟ್ ಪ್ರಕಾರ ದಾಖಲೆಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರಮಗೊಂಡನಹಳ್ಳಿ ಶಾಲಾ ಶೌಚಾಲಯ, ಕಾಂಪೌಂಡ್, ದನ ಶೆಡ್ ನರೇಗಾ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಿ ಗುಣಮಟ್ಟ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಇದೇ ವೇಳೆ ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ವಸೂಲಾತಿ ಪ್ರಗತಿ ಕುರಿತು ಮಾಹಿತಿ ಪಡೆದ ಸಿಇಒ ಅವರು, ಸಿಬ್ಬಂದಿ ಹಾಜರಾತಿಯನ್ನು ಪರಿಶೀಲಿಸಿದರು. ಪಿಡಿಒ ಹಾಗೂ ಸಿಬ್ಬಂದಿ ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರೊಂದಿಗೆ ಉತ್ತಮ ಒಡನಾಟ ಹೊಂದಿರಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳ ಕುಡಿಯುವ ನೀರು, ರಸ್ತೆ, ವಸತಿ ಯೋಜನೆ, ಪಿಂಚಣಿ, ಉದ್ಯೋಗ ಖಾತ್ರಿ ಹಾಗೂ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿ, ಪರಿಶೀಲನೆ ನಡೆಸಿದರು.
ಸ್ಥಳದಲ್ಲೇ ಆದೇಶ ಸಮಸ್ಯೆಗಳನ್ನು ಆಲಿಸಿದ ನಂತರ, ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡದರು.
ಗ್ರಾಮ ಪಂಚಾಯಿತಿಯಲ್ಲಿ ಜಲ ಜೀವನ್ ಮೀಷನ್ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಗಾತಗೊಳಿಸಿ ಎಂದು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಿಡಿಒ ಗ್ರಾಮ ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ತರಬೇತಿ
ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂ.16:
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ Food Craft Institute (FCI) ಹಾಗೂ Institute of Hotel Management (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ತರಬೇತಿಯನ್ನು ನೀಡಲಾಗುತ್ತದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಜೂನ್. 30 ರೊಳಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಚಿದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಕಛೇರಿ ಸಮಯದಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.080-22040633 ಗೆ ಕಛೇರಿಯ ಸಮಯದಲ್ಲಿ ಸಂಪರ್ಕಿಸಲು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











