--Ads--

ದಟ್ಟ ಗಳ್ಳಿ ಬಳಿ ರೆಸ್ಟೋರೆಂಟ್ ನಲ್ಲಿ ನಡೆದ ಅಗ್ನಿ ದುರಂತವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ: ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ

On: June 19, 2026 4:44 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ದಟ್ಟ ಗಳ್ಳಿ ಬಳಿ ರೆಸ್ಟೋರೆಂಟ್ ನಲ್ಲಿ ನಡೆದ ಅಗ್ನಿ ದುರಂತವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ: ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ

ತಾಂಡವಪುರ ಜೂನ್ 20 ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ದಟ ಗಳ್ಳಿ ಬಳಿ ಇರುವ, ಹಾಗೂ ಎರಡು ಅಥವಾ ಮೂರನೇ ಅಂತಸ್ತಿನಲ್ಲಿ ತಾತ್ಕಾಲಿಕವಾಗಿ ಕಟ್ಟಡವನ್ನು ನಿರ್ಮಿಸಿಕೊಂಡು ಅಗ್ನಿ ಸುರಕ್ಷತೆ ಕ್ರಮ ಕೈಗೊಳ್ಳದೇ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಒಂದು ವಾರದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ರವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡಸಿ ಮಾತನಾಡಿದ ಅವರು ಅಗ್ನಿ ದುರಂತಗಳು ಹೇಳಿ ಬರುವುದಿಲ್ಲ. ರೂಫ್ ಟಾಪ್ ಪಬ್, ರೆಸ್ಟೋರೆಂಟ್ ಗಳಲ್ಲಿ ಹುಲ್ಲು, ಅಲಂಕಾರಿಕ ವಿದ್ಯುತ್ ದೀಪ ಬಳಸುವುದು ಹಾಗೂ ಯಾವುದೇ ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಮೈಸೂರು ಮಹಾನಗರ ಪಾಲಿಕೆ ವಲಯ ಅಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಯ ಒಂದು ವಾರದೊಳಗೆ ಪರಿಶೀಲನೆ ನಡೆಸಿ ಟ್ರೇಡ್ ಲೈಸೆನ್ಸ್ ರದ್ದು ಪಡಿಸಲು ಕ್ರಮ ವಹಿಸಬೇಕು ಎಂದು ಹೇಳಿದರು

ಅಬಕಾರಿ ಇಲಾಖೆಯಿಂದ ಸಿ.ಎಲ್-7, ಸಿ.ಎಲ್-2, ಸಿ.ಎಲ್-5 ಯಾವುದೇ ಪರವಾನಗಿ ಪಡೆಯದೇ ಮದ್ಯ ಮಾರಾಟ ಮಾಡುವುದು ಪರವಾನಗಿ ಪಡೆದ ರೀತಿ ಕಾರ್ಯ ನಿರ್ವಹಿಸದೇ ಇರುವ ಬಾರ್, ಪಬ್ ಗಳು ಮೈಸೂರು ನಗರ ಹಾಗೂ ನಗರದ ಹೊರವಲಯಗಳಲ್ಲಿವೆ. ಅಬಕಾರಿ ಇಲಾಖೆ ನಿರಂತರವಾಗಿ ತಪಾಸಣೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಬಕಾರಿ ಇಲಾಖೆಯ ನಿಯಮದ ಪ್ರಕಾರ ಪರವಾನಗಿ ಪಡೆಯದೇ ಬಾರ್ ಅಂಡ್ ರೆಸ್ಟೋರೆಂಟ್ ಗಳು ಆನ್ ಲೈನ್ ನಲ್ಲೇ ಮದ್ಯ ಮಾರಾಟ ಕುರಿತು ಜಾಹೀರಾತು ನೀಡುವುದು ಹಾಗೂ ಜಾಹೀರಾತು ಪಲಕಗಳಲ್ಲಿ ಪ್ರಚಾರ ನೀಡುತ್ತಿರುವುದು ಕಂಡುಬಂದಿದ್ದು, ಅಧಿಕಾರಿಗಳು ಕೂಡಲೇ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು.

ಮಹಾನಗರ ಪಾಲಿಕೆ ಅಧಿಕಾರಿಗಳು, ಅಬಕಾರಿ ಅಧಿಕಾರಿಗಳಿಗೆ ಪರವಾನಗಿ ನೀಡುವ ಸಂದರ್ಭದಲ್ಲಿ ಅಗ್ನಿ ಸುರಕ್ಷತೆ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಒಂದು ದಿನದ ತರಬೇತಿ ನೀಡಲಿದ್ದಾರೆ. ಅಗ್ನಿ ಸುರಕ್ಷತಾ ಕ್ರಮಗಳು ಇಲ್ಲದಿದ್ದಲ್ಲಿ ಪರವಾನಗಾಗಿ ಅರ್ಜಿ ಬಂದ ಸಂದರ್ಭದಲ್ಲೇ ರದ್ದು ಮಾಡಿ ಎಂದರು.

ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಮಾತನಾಡಿ, ಅಬಕಾರಿ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ರೇಡ್ ಮಾಡುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಸಭೆಯಲ್ಲಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಅಗ್ನಿಶಾಮಕ ಅಧಿಕಾರಿ ಗುರುರಾಜ್ ಸೇರದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು

WhatsApp

Join Now

Telegram

Join Now

Instagram

Join Now