--Ads--

ಯೋಗ ಮಾಡುವುದರಿಂದ ಒತ್ತಡದ ಜೀವನದಿಂದ ಮುಕ್ತಿ

On: June 23, 2026 4:20 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಯೋಗ ಮಾಡುವುದರಿಂದ ಒತ್ತಡದ ಜೀವನದಿಂದ
ಮುಕ್ತಿ

ಶಿಡ್ಲಘಟ್ಟ : ಒತ್ತಡದ ಜೀವನದಲ್ಲಿ ಯೋಗದ ಮಹತ್ವ ಇನ್ನಷ್ಟು ಹೆಚ್ಚಿದ್ದು, ಪ್ರತಿಯೊಬ್ಬರೂ ದಿನಚರಿಯಲ್ಲಿ ಯೋಗಕ್ಕೆ ಸ್ಥಾನ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಹೇಳಿದರು.
ನಗರದ ಜೆ.ಎಂ.ಎಪ್.ಸಿ.ನ್ಯಾಯಾಲಯದಲ್ಲಿ ಹಮ್ಮಿಕೊಂಡಿದ್ದ “ಯೋಗ ದಿನಾಚರಣೆ”ಯಲ್ಲಿ ಯೋಗಬ್ಯಾಸ ಮಾಡಿದ ನಂತರ ಅವರು ಮಾತನಾಡಿದರು.

ನಿಯಮಿತ ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ ,ಯೋಗವು ವ್ಯಾಯಾಮವಲ್ಲ, ಅದು ಆರೋಗ್ಯಕರ ಮತ್ತು ಶಿಸ್ತುಬದ್ಧ ಜೀವನಶೈಲಿಯ ಒಂದು ಭಾಗವಾಗಿದೆ ಎಂದು ಹೇಳಿದರು.

ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಎ.ನಾರಾಯಣಸ್ವಾಮಿ ಮಾತನಾಡಿ, ಭಾರತದ ಪ್ರಾಚೀನ ಪರಂಪರೆಯ ಅಮೂಲ್ಯ ಕೊಡುಗೆಯಾಗಿದೆ ಯೋಗ ಎಲ್ಲರೂ ಯೋಗಾಭ್ಯಾಸವನ್ನು ಜೀವನದ ಭಾಗವಾಗಿಸಿಕೊಂಡು ಆರೋಗ್ಯ ಜೀವನ ನಡೆಸಿ ಎಂದರು.

ಯೋಗ ಗುರುಗಳಾದ ಶ್ರೀಕಾಂತ್ ಅವರ ಮಾರ್ಗದರ್ಶನದಲ್ಲಿ ನ್ಯಾಯಾಧೀಶರು , ವಿವಿಧ ವಕೀಲರು ಹಾಗು ಸಿಬ್ಬಂದಿಗೆ ಯೋಗಾಸನಗಳು ಮತ್ತು ಪ್ರಾಣಾಯಾಮ ಅಭ್ಯಾಸ ಪ್ರಧಾನ ಮಾಡಿದರು.
ಈ ವೇಳೆ ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ, ವಕೀಲರ ಸಂಘದ ಕಾರ್ಯದರ್ಶಿ ಸಿ.ಜಿ.ಭಾಸ್ಕ‌ರ್ ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now