--Ads--

ಶಿಡ್ಲಘಟ್ಟ ನಗರದಲ್ಲಿ 517ನೇ ನಾಡಪ್ರಭು ಕೆಂಪೇಗೌಡರ ಜಯಂತಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗು ಪಲ್ಲಕ್ಕಿಗಳ ಮೆರವಣಿಗೆ

On: June 27, 2026 5:03 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಶಿಡ್ಲಘಟ್ಟ ನಗರದಲ್ಲಿ 517ನೇ ನಾಡಪ್ರಭು ಕೆಂಪೇಗೌಡರ  ಜಯಂತಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗು ಪಲ್ಲಕ್ಕಿಗಳ ಮೆರವಣಿಗೆ

ಶಿಡ್ಲಘಟ್ಟ : ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿ, ಜನಪರ ಆಡಳಿತ, ಸಮಾಜಮುಖಿ ಚಿಂತನೆ ಮತ್ತು ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಯುವಜನತೆ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮಾದರಿಯಾಗಿ ಬದುಕಬೇಕು
ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 517ನೇ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದ ಬಸವಣ್ಣ, 16ನೇ ಶತಮಾನದ ನಾಡಪ್ರಭು ಕೆಂಪೇಗೌಡರು, ಮಹರ್ಷಿ ವಾಲ್ಮೀಕಿ ಹಾಗೂ ಡಾ.ಬಿ.ಆರ್. ಅಂಬೇಡ್ಕ‌ರ್ ಸೇರಿದಂತೆ ಅನೇಕ ಮಹನೀಯರು ಸಮಾಜದ ಎಲ್ಲಾ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಿದ್ದು, ಅವರ ಸೇವೆ ಮತ್ತು ಚಿಂತನೆ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು.

ಕೆಂಪೇಗೌಡರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ ,ಮಹನೀಯರ ಜಯಂತಿಗಳನ್ನು ಆಚರಿಸುವ ಉದ್ದೇಶ ಅವರ ಆದರ್ಶಗಳು, ಸಮಾಜಮುಖಿ ಕಾರ್ಯಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದ ಅವರು “ಮಾತೃದೇವೋ ಭವ, ಪಿತೃದೇವೋ ಭವ, ಗುರುದೇವೋ ಭವ” ಎಂಬ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಉನ್ನತ ಗುರಿಗಳನ್ನು ಸಾಧಿಸಬೇಕು ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ತಹಸೀಲ್ದಾ‌ರ್ ಗಗನ ಸಿಂಧು ಮಾತನಾಡಿ, ವಿದ್ಯಾರ್ಥಿಗಳು ಸಹ ಜೀವನದಲ್ಲಿ ಸ್ಪಷ್ಟ ಗುರಿ, ದೃಢ ಸಂಕಲ್ಪ ಮತ್ತು ದೂರದೃಷ್ಟಿಯೊಂದಿಗೆ ಯೋಜಿತವಾಗಿ ಪರಿಶ್ರಮಪಟ್ಟರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದರು.

ಕಾರ್ಯಕ್ರಮಕ್ಕೆ ಮೊದಲು ನಗರದ ಮಯೂರ ವೃತ್ತದ ಬಳಿಯ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಲಾಯಿತು,

ಆನಂತರ ಬಸ್ ನಿಲ್ದಾಣದಿಂದ ಟಿ.ಬಿ.ರಸ್ತೆ, ಕೋಟೆ ವೃತ್ತ ಹಾಗೂ ಕಾಂಗ್ರೆಸ್ ಭವನ ರಸ್ತೆ ಮಾರ್ಗವಾಗಿ ನಾಡಪ್ರಭು ಕೆಂಪೇಗೌಡರ ಪಲ್ಲಕ್ಕಿಗಳ ಅದ್ದೂರಿ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದವು.

ಜಾನಪದ ಕಲಾತಂಡಗಳ ಮನಮೋಹಕ ಪ್ರದರ್ಶನ
ಡೊಳ್ಳು ಕುಣಿತ, ತಮಟೆ ವಾದನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆದವು.

ಪಲ್ಲಕ್ಕಿ ಮೆರವಣಿಗೆಯಲ್ಲಿ ಶಾಸಕ ಬಿ.ಎನ್. ರವಿಕುಮಾ‌ರ್, ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ, ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ, ರೈತರ ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ , ತಾದೂರು ಮಂಜುನಾಥ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಜಯಂತಿ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಗಗನಸಿಂಧು, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ನಗರಸಭೆ ಆಯುಕ್ತೆ ಅಮೃತ ಗೌಡ , ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ಪಿ.ಎಲ್.ಡಿ. ಬ್ಯಾಂಕ್ ಅದ್ಯಕ್ಷ ಎಂ.ಜಿ.ಸುರೇಶ್ ,ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ,ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್,ತಾಲ್ಲೂಕು ಪಂಚಾಯತಿ ಮಾಜಿ ಅದ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಒಕ್ಕಲಿಗ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್‌ ಕುಮಾರ್,ಒಕ್ಕಲಿಗ ಯುವಸೇನೆ ಅದ್ಯಕ್ಷ ಜೆ.ವಿ.ವೆಂಕಟಸ್ವಾಮಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now