--Ads--

ನಂಜನಗೂಡು ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

On: June 28, 2026 7:29 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ನಂಜನಗೂಡು ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ತಾಂಡವಪುರ ಜೂನ್ 27 ನಂಜನಗೂಡು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಪಾಲ್ಗೊಂಡು, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.

ಬಳಿಕ ಶಾಸಕರು ಮಾತನಾಡಿ ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯ ನಾಯಕತ್ವ, ಜನಪರ ಆಡಳಿತ, ನಗರ ನಿರ್ಮಾಣದ ಅಪೂರ್ವ ಕೌಶಲ್ಯ ಹಾಗೂ ನಾಡಿನ ಅಭಿವೃದ್ಧಿಗೆ ಅವರು ನೀಡಿದ ಅನನ್ಯ ಕೊಡುಗೆಗಳನ್ನು ಸ್ಮರಿಸಿ, ಅವರ ಆದರ್ಶಗಳು ಮತ್ತು ಆಡಳಿತ ದೃಷ್ಟಿಕೋನವು ಇಂದಿಗೂ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಿದೆ ಎಂದರು.

ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ , ಕರ್ನಾಟಕ ಮೃಗಲಾಯ ಪ್ರಾಧಿಕಾರ ಅಧ್ಯಕ್ಷ ರಂಗಸ್ವಾಮಿ , ತಹಸೀಲ್ದಾರ್ ಸ್ಮಿತಾ ರಾಮು , ನಗರ ಬ್ಲಾಕ್ ಅಧ್ಯಕ್ಷ ಸಿ. ಎಂ ಶಂಕರ್ , ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷ ಶ್ರೀಕಂಠ ನಾಯಕ , ಮುಖ್ಯಭಾಷಣಕರರು ಭಟ್ಟಸ್ವಾಮಿ ರವರು, ಸಮಾಜದ ಮುಖಂಡರಾದ ಕೃಷ್ಣಪ್ಪ , ನರಸಿಂಹ ಸ್ವಾಮಿ , ಕೃಷ್ಣಪ್ಪ ಗೌಡ , ಶ್ರೀಧರ್ , ಜಗದೀಶ್ , ಮಂಜುನಾಥ್ , ಕರಳಪುರ ನಾಗರಾಜ್ , ಗೋವಿಂದ ರಾಜು , ಮಹದೇವಸ್ವಾಮಿ , ರವಿಕುಮಾರ್ , ಚಂದನ್ , ಅಬ್ದುಲ್ ಖಾಧರ್ , ಗಾಯತ್ರಿ , ರವಿ ಪ್ರಕಾಶ್ ರವರು ಸೇರಿದಂತೆ ಸಂಘ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು ಮುಖಂಡರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now