ವಿಜಯ ದರ್ಪಣ ನ್ಯೂಸ್….
ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ “ಪಲ್ಸ್ ಪೋಲಿಯೊ ಹನಿ” ಹಾಕಿಸಿ ಪೋಲಿಯೋ ಮುಕ್ತ ಭಾರತ ಮಾಡೋಣ : ಶಾಸಕ ಬಿ.ಎನ್.ರವಿಕುಮಾರ್

ಶಿಡ್ಲಘಟ್ಟ : “ಪಲ್ಸ್ ಪೋಲಿಯೋ ಲಸಿಕೆ” ಎರಡು ಹನಿ ಕಡ್ಡಾಯವಾಗಿ ಪೋಷಕರು ಹಾಕಿಸುವ ಮೂಲಕ ಮಕ್ಕಳ ಆರೋಗ್ಯ ಕಾಪಾಡುವ ಜತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಹಕರಿಸಬೇಕು
ಎಂದು ಶಾಸಕ ಬಿ.ಎನ್. ರವಿಕುಮಾರ್ ಅವರು ಮನವಿ ಮಾಡಿದರು.
ತಾಲ್ಲೂಕಿನ ಆನೂರು ಹುಣಸೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಧಾನಸಭಾ ಕ್ಷೇತ್ರದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಪೋಲಿಯೋ ಮುಕ್ತ ಭಾರತ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪೋಷಕರು ಸಹಕರಿಸಬೇಕು ಎಂದು ಹೇಳಿದರು.
ತಾಲೂಕಿನಲ್ಲಿ 28 ಜೂನ್ ರಂದು ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪ್ರಗತಿ ,Rural:97.96% ,
Urban:91.30% ,Total:96.04%
29 ಜೂನ್ ರಿಂದ ಮನೆ ಮನೆಗೆ ಹೋಗಿ ಉಳಿದ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಮುಂದುವರೆಯಲಿದೆ ,ತಾಲ್ಲೂಕಿನಲ್ಲಿ 0-5 ವರ್ಷದ 20,755 ಮಕ್ಕಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಗಗನ ಸಿಂಧು,
ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮೂರ್ತಿ, ಸಿಡಿಪಿಓ ವಿದ್ಯಾ ವಸ್ತ್ರದ್, ಕೆ.ಮುತ್ತಕದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ನರ್ಮದಾ, ಮುಖಂಡರಾದ ತಾದೂರು ರಘು ಮೇಲೂರು ಮಂಜುನಾಥ್,ನಾರಾಯಣಸ್ವಾಮಿ, ಆನೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್,ನರಸಿಂಹ ಮೂರ್ತಿ, ಚಿಕ್ಕಣ್ಣ ಮುಂತಾದವರು ಹಾಜರಿದ್ದರು.










