--Ads--

ಅಕ್ಕಿಪೇಟೆ ಮುಖ್ಯರಸ್ತೆಯ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ: ಅಭಿವೃದ್ಧಿ ಕಾಮಗಾರಿಗಳಿಗೆ ದಿನೇಶ್ ಗುಂಡೂರಾವ್ ಚಾಲನೆ

On: June 30, 2026 12:59 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಅಕ್ಕಿಪೇಟೆ ಮುಖ್ಯರಸ್ತೆಯ ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ: ಅಭಿವೃದ್ಧಿ ಕಾಮಗಾರಿಗಳಿಗೆ ದಿನೇಶ್ ಗುಂಡೂರಾವ್ ಚಾಲನೆ

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಟನ್‌ಪೇಟೆ ವಾರ್ಡ್-120ರ ಅಕ್ಕಿಪೇಟೆ ಮುಖ್ಯರಸ್ತೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಸಿಮೆಂಟ್ ಕಾಂಕ್ರೀಟ್ ರಸ್ತೆ ಹಾಗೂ ಎಲ್‌ಇಡಿ ಬೀದಿ ದೀಪಗಳ ಕಾಮಗಾರಿಯನ್ನು ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾಟನ್‌ಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್. ಶ್ರೀನಿವಾಸ್ ಮೂರ್ತಿ, ಗುತ್ತಿಗೆದಾರ ಚಂದ್ರಮೋಹನ್, ಕಾಂಗ್ರೆಸ್ ಮುಖಂಡರು, ಸ್ಥಳೀಯ ನಿವಾಸಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಶಾಸಕ ದಿನೇಶ್ ಗುಂಡೂರಾವ್ ರವರು ಮಾತನಾಡಿ, “ನಮ್ಮ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ಶರವೇಗದಲ್ಲಿ ನಡೆಯುತ್ತಿವೆ.

ಅಕ್ಕಿಪೇಟೆ ಮುಖ್ಯರಸ್ತೆ ನಗರದ ಅತ್ಯಂತ ಜನನಿಬಿಡ ಹಾಗೂ ವಾಹನ ಸಂಚಾರ ಹೆಚ್ಚಿರುವ ಪ್ರದೇಶವಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸಿ ಜನರಿಗೆ ಸಮರ್ಪಿಸಿದ್ದೇವೆ.

ರಸ್ತೆ ಮತ್ತು ಎಲ್‌ಇಡಿ ಬೀದಿ ದೀಪಗಳ ನಿರ್ಮಾಣದಿಂದ ಸ್ಥಳೀಯರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಈ ಕಾಮಗಾರಿಯಿಂದ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿರುವುದು ನನಗೂ ಸಂತೋಷ ತಂದಿದೆ. ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು,” ಎಂದು ತಿಳಿಸಿದರು.

WhatsApp

Join Now

Telegram

Join Now

Instagram

Join Now