ವಿಜಯ ದರ್ಪಣ ನ್ಯೂಸ್…
ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ಶಿಡ್ಲಘಟ್ಟ : ಮುಂಗಾರು ಹಂಗಾಮಿನ 2026-27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ರೈತರು ಇದರ ದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಎಸ್.ಅಬೀದ್ ಸದುಪಯೋಗ ಪಡಿಸಿಕೊಳ್ಳಬೇಕೆಂದು ರೈತರಲ್ಲಿ ಮನವಿ ಮಾಡಿದ್ದಾರೆ.
ತಾಲ್ಲೂಕಿನ ಕೃಷಿ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ರೌಡಿ ಇಲಾಖೆಯ ಪ್ರಗತಿಪರ ಪರಿಶೀಲಿಸಿ ಕುಂದು ಕೊರತೆಗಳನ್ನು ಆಲಿಸಿ ನಂತರ ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ 7 ಬೆಳೆಗಳ ‘ಸಹಿತ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 9 ಪ್ರಮುಖ ಬೆಳೆಗಳ ಕುರಿತಂತೆ ತಾಲ್ಲೂಕುವಾರು ಮತ್ತು ಗ್ರಾಮ ಪಂಚಾಯಿತಿಯವರು ಈಗಾಗಲೇ ನೋಟಿಫಿಕೇಶನ್ ಮಾಡಲಾಗಿದೆ ,
ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬರಗಾಲದ ಸ್ಥಿತಿ ಬರುವ ಮುನ್ಸೂಚನೆ ಕಂಡುಬಂದಿದೆ ,ವಿಮೆ ಸೌಲಭ್ಯಗಳ ಮೂಲಕ ಅನುಕೂಲ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ಶೇ.2ರಷ್ಟು ವಿಮೆ ಕಂತನ್ನು ಪಾವತಿಸಿ ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮುಖ್ಯ ಬೆಳೆಗಳಿಗೆ ಬಿತ್ತನೆ ಮಾಡಲು ಸಾಧ್ಯವಾಗಲಿಲ್ಲ ಎಂದರೆ ಶೇ.25ರಷ್ಟು ಮತ್ತು ಬಿತ್ತನೆ ಆಯಿತು, ಬಿತ್ತನೆ ವಿಫಲ ಅಥವಾ ಬೆಳೆಗಳು ಒಣಗಿ ಹೋದರು ಸಹ ಶೇ.25ರಷ್ಟು ವಿಮೆ ಸೌಲಭ್ಯ ರೈತರಿಗೆ ಸಿಗಲಿದೆ,ಹೆಚ್ಚಿನ ಮಾಹಿತಿಯನ್ನು ಜಿಲ್ಲೆಯ ಕೃಷಿ ಸಹಾಯಕ ನಿರ್ದೇಶಕರು, ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದುಕೊಂಡು ವಿಮೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಆರ್.ರವಿ ಹಾಜರಿದ್ದರು.










