--Ads--

ಸುಳ್ಳು ಸುದ್ದಿಗಳನ್ನು ತಡೆಯಲು ಪತ್ರಕರ್ತರು  ಮುಂದಾಗಬೇಕು: ಡಾ.ಪ್ರವೀಣ್ ಪಿ.ಬಾಗೇವಾಡಿ 

On: July 3, 2026 11:51 AM
Follow ಮಾಡಿ
--Ads--

Whatsapp Channel

Join Now

Telegram Group

Join Now
ವಿಜಯ ದರ್ಪಣ ನ್ಯೂಸ್…..

ಸುಳ್ಳು ಸುದ್ದಿಗಳನ್ನು ತಡೆಯಲು ಪತ್ರಕರ್ತರು  ಮುಂದಾಗಬೇಕು: ಡಾ.ಪ್ರವೀಣ್ ಪಿ.ಬಾಗೇವಾಡಿ 

ಕೋಲಾರ : ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಪತ್ರಕರ್ತರ ಜವಾಬ್ದಾರಿ ಹೆಚ್ಚಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ತಡೆಯಲು ಪತ್ರಕರ್ತರು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪ್ರವೀಣ್ ಪಿ.ಬಾಗೇವಾಡಿ ತಿಳಿಸಿದರು.
ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ವಾರ್ತಾಲಾಪ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರು ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಾರೆ. ಸರ್ಕಾರದ ಪುರಸ್ಕೃತ ಯೋಜನೆಗಳನ್ನು ಜನರಿಗೆ ತಲುಪಿಸಲು ಪತ್ರಕರ್ತರ ಪಾತ್ರ ಮುಖ್ಯವಾಗಿದೆ.
ಇತ್ತೀಚಿನ ದಿನಗಳಲ್ಲಿ ಮುದ್ರಣ ಮತ್ತು ಮಾಧ್ಯಮಗಳ ಜೊತೆಗೆ ಸಾಮಾಜಿಕ ಮಾಧ್ಯಮದ ಬಳಕೆ ಹೆಚ್ಚಾಗಿದೆ. ಇದರಿಂದ ಅನುಕೂಲಗಳಿದ್ದರೂ, ಸುಳ್ಳು ಸುದ್ದಿಗಳು ಅತಿ ವೇಗವಾಗಿ ಹರಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಯಾವುದೇ ಸಣ್ಣ ನಕಾರಾತ್ಮಕ ಘಟನೆಯನ್ನು ದೊಡ್ಡದಾಗಿ ಬಿಂಬಿಸುವ ಪ್ರವೃತ್ತಿ ಕಂಡುಬರುತ್ತಿದೆ ಎಂದು ವಿಷಾಧ ವ್ಯಕ್ತ ಪಡಿಸಿದರು. ಜಿಲ್ಲಾಡಳಿತವು ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡಲು ಬದ್ಧವಾಗಿದೆ. ಆಡಳಿತದಲ್ಲಿ ಉತ್ತರದಾಯಿತ್ವ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ಮಾಧ್ಯಮಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಪಿಐಬಿಯ ಸಹಾಯಕ ನಿರ್ದೇಶಕ ಮಧು. ಎಂ ಮಾತನಾಡಿ ಸರ್ಕಾರದ ಯೋಜನೆಗಳ ಲಾಭವು ಕಟ್ಟಕಡೆಯ ವ್ಯಕ್ತಿಗೂ ತಲುಪಿದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂಬ ಆಶಯದೊಂದಿಗೆ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದರು.
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಕೆ. ಚಂದ್ರಶೇಖರ್, ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರ ಗಣೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಾಧಿಕಾರಿ ಮುನಿರಾಜು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now