--Ads--

ಪ್ರತಿಯೊಬ್ಬರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾಗವಹಿಸಿ :ಆರ್ ಎಂ ಉಮೇಶ್ 

On: July 3, 2026 4:22 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಪ್ರತಿಯೊಬ್ಬರು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾಗವಹಿಸಿ :ಆರ್ ಎಂ ಉಮೇಶ್ 

ಶಿಡ್ಲಘಟ್ಟ : ಪ್ರತಿಯೊಬ್ಬ ನಾಗರಿಕರೂ ವಿಶೇಷ
ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ
ಭಾಗವಹಿಸಿ ಆತಂಕಪಡಬೇಡಿ ಮತಗಟ್ಟೆ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಲಿದ್ದು, ಸೂಚಿಸಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡಿರಬೇಕು
ಎಂದು ಮೇಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆ‌ರ್.ಎ.ಉಮೇಶ್‌ ತಿಳಿಸಿದರು.

ತಾಲ್ಲೂಕಿನ ಮೇಲೂರು ಗ್ರಾಮದ ಅಂಗನವಾಡಿ-2ರಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಎನ್ಯುಮರೇಷನ್ ನಮೂನೆಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎರಡು ಕ್ಷೇತ್ರಗಳಲ್ಲಿ ಮತದಾರರಾಗಿ ಹೆಸರು ಹೊಂದಿರುವವರು ಒಂದು ಸ್ಥಳದಲ್ಲಿ ಮಾತ್ರ ಎನ್ಯುಮರೇಷನ್ ಅರ್ಜಿ ಸಲ್ಲಿಸಬೇಕು ಎರಡೂ ಕಡೆ ಅರ್ಜಿ ಸಲ್ಲಿಸಿದರೆ ಹೆಸರು ಮತದಾರರ ಪಟ್ಟಿಯಿಂದ ಅಳಿಸುವ ಸಾಧ್ಯತೆ ಇರುತ್ತದೆ ಎಂದರು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಅರ್ಹ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ಸಹಕರಿಸಬೇಕು ಎಂದು ಹೇಳಿದರು.

ಕುಟುಂಬದಲ್ಲಿ ಮೃತಪಟ್ಟಿರುವವರು, ಬೇರೆ ಊರುಗಳಲ್ಲಿ ಮತದಾರರಾಗಿ ಹೆಸರು ಹೊಂದಿರುವವರು ಹಾಗೂ ಮದುವೆಯಾಗಿ ಬೇರೆ ಊರುಗಳಿಗೆ ತೆರಳಿರುವ ಮಹಿಳೆಯರ ಹೆಸರುಗಳನ್ನು ಪಟ್ಟಿಯಿಂದ ತೆಗೆಸಬೇಕು , 18 ವರ್ಷ ಪೂರೈಸಿದ ಯುವಕರು ನಮೂನೆ-6ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ತ್ರಿಮೂರ್ತಿ,
ಹಿರಿಯರಾದ ರಾಮಕೃಷ್ಣಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಂ.ಕೆ.ರವಿಪ್ರಸಾದ್, ಮಂಜುನಾಥ್‌, ಮತಗಟ್ಟೆ ಅಧಿಕಾರಿ ವೆಂಕಟಲಕ್ಷ್ಮಮ್ಮ, ಗ್ರಾಮ ಸಹಾಯಕ ರಮೇಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now