--Ads--

ಡಾ.ಬಿ.ಆ‌ರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪರಿಕರ ವಿತರಣೆ

On: July 3, 2026 4:29 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಡಾ.ಬಿ.ಆ‌ರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯಿಂದ
ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಪರಿಕರ ವಿತರಣೆ

ಶಿಡ್ಲಘಟ್ಟ : ಗ್ರಾಮದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುವ ಉದ್ದೇಶದಿಂದ ಶಿಕ್ಷಕಿಯನ್ನು ನೇಮಿಸಿ ವೇತನ, ಪೌಷ್ಟಿಕ ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಅಕಾಡೆಮಿಯೇ ಒದಗಿಸುತ್ತಿದೆ ಎಂದು
ಡಾ.ಬಿ.ಆ‌ರ್.ಅಂಬೇಡ್ಕರ್ ಜ್ಞಾನ ಅಕಾಡೆಮಿಯ ಅಧ್ಯಕ್ಷ
ಡಿ.ರವಿಕುಮಾ‌ರ್ ತಿಳಿಸಿದರು.

ತಾಲ್ಲೂಕಿನ ಮಳ್ಳೂರಿನ ಡಾ.ಅಂಬೇಡ್ಕರ್ ಭವನದಲ್ಲಿ ರಾತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಅಕಾಡೆಮಿಯ ವತಿಯಿಂದ ಶಾಲಾ ಬ್ಯಾಗ್‌, ನೋಟ್‌ ಪುಸ್ತಕ, ಚಪ್ಪಲಿ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕ‌ರ್ ಅವರ ಆಶಯಗಳನ್ನು ಸಾಕಾರಗೊಳಿಸಲು ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುನಿಯಪ್ಪ ಮಾತನಾಡಿ, ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವುದು ಪ್ರಮುಖ ಆದ್ಯತೆ ನೀಡುವುದರ ಜತೆಗೆ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವೆಂಕಟರೋಣಪ್ಪ, ವಕೀಲ ಎನ್. ಅಶೋಕ್,ಕುಮಾರ್, ಮೂರ್ತಿ, ನಾರಾಯಣಸ್ವಾಮಿ,
ರಾಜೇಶ್, ಪವನ್ ಹಾಗು ಗ್ರಾಮಸ್ಥರು ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now