ವಿಜಯ ದರ್ಪಣ ನ್ಯೂಸ್….
ಕೇಂದ್ರ ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್ ಎಸ್ಐಆರ್ ಪ್ರಕ್ರಿಯೆ ಖುದ್ದು ಪರಿಶೀಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.07:
ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಸಂಬಂಧ ಇಂದು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಸಂಜಯ್ ಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 176 ಕೆಎಸ್ಸಾರ್ಟಿಸಿ ಬಡಾವಣೆಗೆ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಅವರು ಮತಗಟ್ಟೆ ಸಂಖ್ಯೆ 212ರ ಹೆಚ್ ಕೆಂಪಲಿಂಗಣ್ಣಹಳ್ಳಿಗೆ ಬೇಟಿ ನೀಡಿ ಮತಗಟ್ಟೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಹಾಗೂ ಪ್ರಗತಿ ಪರಿಶೀಲನೆ ಕಾರ್ಯ ನಡೆಸಿದರು.

ಈ ವೇಳೆ ನೆಲಮಂಗಲ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪ್ರಕಾಶ್, ನೆಲಮಂಗಲ ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಮಲ್ಲೇಶ್, ಬಿ ಎಲ್ ಓ ಮೇಲ್ವಿಚಾರಕರು, ಮತಗಟ್ಟೆ ಅಧಿಕಾರಿಗಳು ಇದ್ದರು.










