--Ads--

ವೃತ್ತಿ ಬದ್ಧವಾಗಿ ಸಂಘಟನೆ ಬಲಪಡಿಸಲು ಶಿವಾನಂದ ತಗಡೂರು ಕರೆ

On: July 8, 2026 5:43 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಚಿಕ್ಕಮಗಳೂರು ಜಿಲ್ಲಾ ಸಂಘಕ್ಕೆ ಕೆಯುಡಬ್ಲೂ ಜೆ ರಾಜ್ಯಾಧ್ಯಕ್ಷರ ಭೇಟಿ;

ವೃತ್ತಿ ಬದ್ಧವಾಗಿ ಸಂಘಟನೆ ಬಲಪಡಿಸಲು ಶಿವಾನಂದ ತಗಡೂರು ಕರೆ

ಚಿಕ್ಕಮಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಭೇಟಿ ನೀಡಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪತ್ರಕರ್ತರ ಸಂಘಟನೆಯನ್ನು ವೃತ್ತಿಬದ್ಧವಾಗಿ ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಎಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಕಟ್ಟುವ ಕೆಲಸಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಈ ಒಂದು ಕಾಲದಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದ ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘವನ್ನು ಮತ್ತೆ ಅದೇ ಮಟ್ಟಕ್ಕೆ ಕೊಂಡೊಯ್ಯುವ ಜವಾಬ್ದಾರಿ ಎಲ್ಲರ ಮೇಲಿದೆ. ವೈಮನಸ್ಸುಗಳನ್ನು ಬದಿಗೊತ್ತಿ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾಧ್ಯಕ್ಷ ಅನಿಲ್‌ ಆನಂದ್‌ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಘಟಕಗಳನ್ನು ರಚಿಸಿರುವುದು ಶ್ಲಾಘನೀಯ. ಈ ಕಾರ್ಯದಲ್ಲಿ ರಾಜ್ಯ ಉಪಾಧ್ಯಕ್ಷ ಎಚ್.ಬಿ. ಮದನಗೌಡ ಅವರ ಪರಿಶ್ರಮ ಹಾಗೂ ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್ ಅವರ ಸಹಕಾರವೂ ಮಹತ್ವದ್ದಾಗಿದೆ ಎಂದು ಹೇಳಿದರು.

ಕೆಯುಡಬ್ಲೂ ಜೆ ಜೊತೆಗೆ ಮುಂದುವರಿಯಲು ನಿರ್ಧರಿಸಿರುವ ಜಯಕುಮಾ‌ರ್ ಅವರ ತೀರ್ಮಾನ ಸ್ವಾಗತಾರ್ಹವಾಗಿದೆ. ಹಿರಿಯ ಪತ್ರಕರ್ತ ದಿನೇಶ್ ಪಟವರ್ಧನ್ ಸಭೆಯಲ್ಲಿ ಭಾಗವಹಿಸಿ ಸಂಘವನ್ನು ಮತ್ತಷ್ಟು ಬಲಪಡಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಸಭೆಯಲ್ಲಿ ಜುಲೈ ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲಾ ಸಂಘದ ಅಧಿಕಾರ ಆಯೋಜಿಸಲು ಸ್ವೀಕಾರ ಸಮಾರಂಭವನ್ನು ನಿರ್ಧರಿಸಲಾಯಿತು.

ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್, ಜಿಲ್ಲಾಧ್ಯಕ್ಷ ಅನಿಲ್ ಆನಂದ್, ಹಿರಿಯ ಪತ್ರಕರ್ತ ದಿನೇಶ್ ಪಟವರ್ಧನ್, ಜಯಕುಮಾ‌ರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಹಿರಿಯ ಮತ್ತು ಕಿರಿಯ ಸದಸ್ಯರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now