ವಿಜಯ ದರ್ಪಣ ನ್ಯೂಸ್….
ಮೈಸೂರು ವಿ ವಿ ಎಸ್ಸಿ ಮತ್ತು ಎಸ್ ಟಿ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆ:ಅಧಿಕಾರಿಗಳೊಂದಿಗೆ ಸಚಿವ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಜುಲೈ 10ಮೈಸೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು ಗೃಹ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು
ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ಯಾವುದೇ ಅರ್ಹ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯ ಆರ್ಥಿಕ ಅಡಚಣೆಯಿಂದ ಹಿನ್ನಡೆಯಾಗಬಾರದು ಎಂಬುದು ನಮ್ಮ ಸರ್ಕಾರದ ಬದ್ಧತೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಸಮನ್ವಯದ ಮೂಲಕ ತಲಾ 58 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವಂತೆ ಸೂಚನೆ ನೀಡಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು ಭವಿಷ್ಯದಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಪ್ರವೇಶಾತಿ ಪ್ರಕ್ರಿಯೆ, ಮಾರ್ಗದರ್ಶಕರ ಸಾಮರ್ಥ್ಯ ಹಾಗೂ ಸಂಪನ್ಮೂಲಗಳ ನಡುವೆ ಸಮತೋಲನ ಕಾಯ್ದುಕೊಳ್ಳುವ ಅಗತ್ಯವಿದೆ ಎಂಬುದನ್ನೂ ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಒತ್ತಿ ಹೇಳಿದರು
ಸಭೆಯ ಬಳಿಕ ಸಂಶೋಧನಾ ವಿದ್ಯಾರ್ಥಿಗಳ ನಿಯೋಗವನ್ನು ಸಹ ಭೇಟಿ ಮಾಡಿ ಅವರ ಅಹವಾಲುಗಳು ಹಾಗೂ ಅಭಿಪ್ರಾಯಗಳನ್ನು ಆಲಿಸಿ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮಗಳು ಆಗುವುದೆಂದು ಸಚಿವರು ಭರವಸೆ ನೀಡಿದರು
ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿಯ ಶಿಕ್ಷಣದ ಹಕ್ಕನ್ನು ರಕ್ಷಿಸುವುದು ನಮ್ಮ ಸರ್ಕಾರದ ಆದ್ಯತೆ. ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಗುಣಮಟ್ಟದ ಉನ್ನತ ಶಿಕ್ಷಣಕ್ಕಾಗಿ ನಮ್ಮ ಬದ್ಧತೆ ನಿರಂತರವಾಗಿರಲಿದೆ. ಎಂದು ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು
ಸಭೆಯಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುಂತಾದವರು ಹಾಜರಿದ್ದರು








