ವಿಜಯ ದರ್ಪಣ ನ್ಯೂಸ್….
ಚೀಮಂಗಲ ‘ಪಿಎಂಶ್ರೀ’ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀಶಾರದಾದೇವಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

ಶಿಡ್ಲಘಟ್ಟ : ಶಾಲೆಗಳಲ್ಲಿ ಶಿಕ್ಷಣ ನೀಡುವ ಜತೆಗೆ ಉತ್ತಮ ಸಂಸ್ಕಾರ ರೂಪಿಸುವ ಪವಿತ್ರ ತಾಣಗಳಾಗಬೇಕು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಕಲಿಕೆಯ ಆಸಕ್ತಿ, ಗುರುಹಿರಿಯರ ಬಗ್ಗೆ ಗೌರವ ಹಾಗೂ ಸನ್ಮಾರ್ಗದಲ್ಲಿ ಸಾಗುವ ಮೌಲ್ಯಗಳನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು
ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಸ್ವಾಮಿ ಹೇಳಿದರು.
ತಾಲ್ಲೂಕಿನ ಚೀಮಂಗಲ ಗ್ರಾಮದ “ಪಿಎಂಶ್ರೀ” ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ಶಾರದಾದೇವಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿಷ್ಠಾಪನೆ ಅಂಗವಾಗಿ ಗಣಪತಿ ಪೂಜೆ, ವಾಸ್ತು ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು,ವೇದಮೂರ್ತಿ ಅಭಿಲಾಷ್ ಅವರ ನೇತೃತ್ವದಲ್ಲಿ ಮಂತ್ರಘೋಷಗಳ ನಡುವೆ ಶಾರದಾದೇವಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜೆಗಳನ್ನು ಶಾಸ್ರೋಕ್ತವಾಗಿ ನಡೆಸಲಾಯಿತು.
ಶಾಲೆಯ ಹಳೆಯ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ.ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಶ್ರೀ ಶಾರದಾದೇವಿ ಪ್ರತಿಷ್ಟಾಪನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಮುಖ್ಯಶಿಕ್ಷಕ ಎಂ. ನಾಗರಾಜು, ಎಸ್.ಡಿ.ಎಂ.ಸಿ ಅಧ್ಯಕ್ಷ ಆದರ್ಶ್ ರವಿ, ಸಮಾಜ ಸೇವಕ ಶ್ರೀನಿವಾಸ್, ನಿವೃತ್ತ ಮುಖ್ಯಶಿಕ್ಷಕರಾದ ಸಿ.ಎಂ.ಮುನಿರಾಜು, ಮಧು, ಗ್ರಾಮದ ಮುಖಂಡರು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.








